Advertisement
ರಸ್ತೆ ದುರಸ್ತಿಗೊಳಿಸುವಂತೆ ಜನಪ್ರತಿನಿಧಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನವಾಗಿಲ್ಲ. ನಮ್ಮ ಭಾಗದ ಅಭಿವೃದ್ಧಿಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ರವಿವಾರ ರಸ್ತೆಯ ಹೊಂಡದಲ್ಲಿ ಗಿಡಗಳನ್ನು ನೆಟ್ಟು ಪ್ರತಿಭಟನೆ ನಡೆಸಿದರು.
ರಸ್ತೆಯ ಡಾಂಬರೀಕರಣ ನಡೆದು ಹತ್ತಾರು ವರ್ಷ ಆಗಿದೆ. ಚರಂಡಿ ವ್ಯವಸ್ಥೆ ಸಮರ್ಪಕವಾಗಿಲ್ಲದೆ ರಸ್ತೆಯಲ್ಲಿ ನೀರು ಹರಿಯುತ್ತಿದೆ. ವಾಹನದಲ್ಲಿ ಸಂಚರಿಸಲು ಸಾಧ್ಯವಾಗುತ್ತಿಲ್ಲ. ಚುನಾವಣೆ ಬಂದಾಗ ಮಾತ್ರ ಮನೆಬಾಗಿಲಿಗೆ ಬರುವ ಜನಪ್ರತಿನಿಧಿಗಳು ಅನಂತರ ನಮ್ಮ ಸಮಸ್ಯೆ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ಎನ್ನುವುದು ಇಲ್ಲಿನ ನಿವಾಸಿಗಳ ದೂರಾಗಿದೆ. ಪರಿಹಾರಕ್ಕೆ ಆಗ್ರಹ:
ರಸ್ತೆಯನ್ನು ತುರ್ತು ರುದಸ್ತಿಗೊಳಿಸಬೇಕು ಹಾಗೂ ಸಂಪೂರ್ಣ ಡಾಂಬರೀಕರಣ ಮಾಡಬೇಕು. ಚರಂಡಿ ಹೂಳೆತ್ತಲು ಆಧ್ಯತೆ ನೀಡಬೇಕು ಎನ್ನುವುದು ಇವರ ಆಗ್ರಹವಾಗಿದೆ.