Advertisement

ಮಧ್ಯ ರಸ್ತೆಯಲ್ಲಿ ನಿಲ್ಲಿಸಿದ್ದ ಟ್ರಾಕ್ಟರ್ ಗೆ ಬೈಕ್ ಢಿಕ್ಕಿ: ಯುವಕ ಸ್ಥಳದಲ್ಲೇ ಸಾವು

10:57 PM Jul 02, 2022 | Team Udayavani |

ಮೂಡಿಗೆರೆ : ರಸ್ತೆ ಮಧ್ಯೆ ನಿಲ್ಲಿಸಿದ್ದ ಟ್ರ್ಯಾಕ್ಟರ್ ಒಂದಕ್ಕೆ ಹಿಂದಿನಿಂದ ಬೈಕ್ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶನಿವಾರ ೯;೩೦ ಸಮಯದಲ್ಲಿ ನಡೆದಿದೆ.
ಘಟನೆಯಲ್ಲಿ ಗೋಣಿಬೀಡ್ ಮೂಲದ ರಕ್ಷಿತ್ (25) ಮೃತ ದುರ್ದೈವಿ.

Advertisement

ಬಣಕಲ್ ಕಡೆಯಿಂದ ಗೋಣಿಬೀಡ್ ಕಡೆಗೆ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಮೂಡಿಗೆರೆ ಬಸ್ ಡಿಪೋ ಬಳಿ ರಸ್ತೆ ಮಧ್ಯದಲ್ಲಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಗೆ ಹಿಂದಿನಿಂದ ಢಿಕ್ಕಿ ಹೊಡೆದಿದ್ದಾನೆ ಪರಿಣಾಮ ಯುವಕ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಮೂಡಿಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಜೀವ ತೆಗೆದವರು ಜೀವ ಉಳಿಸುವ ಕಾರಣದಲ್ಲಿ ಜಾಮೀನು ಕೋರುವಂತಿಲ್ಲ: ಹೈಕೋರ್ಟ್‌

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next