Advertisement

Protest: ಹಕ್ಕುಪತ್ರ ನೀಡಲು ಅಧಿಕಾರಿಗಳ ಹಿಂದೇಟು: ಗ್ರಾ.ಪಂ ಉಪಾಧ್ಯಕ್ಷರಿಂದ ಮೌನ ಪ್ರತಿಭಟನೆ

03:03 PM Sep 05, 2023 | Team Udayavani |

ಕೊಟ್ಟಿಗೆಹಾರ: ಮೂಡಿಗೆರೆ ತಾಲ್ಲೂಕಿನ ನಿಡುವಳೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ನವೀನ್ ಹಾವಳಿ ಮೂಡಿಗೆರೆ ಮಿನಿ ವಿಧಾನಸೌಧದ ಎದುರು ಏಕಾಂಗಿಯಾಗಿ ಮೌನ ಪ್ರತಿಭಟನೆಗೆ ಮುಂದಾಗಿದ್ದಾರೆ.

Advertisement

ಎರಡು ವರ್ಷಗಳಿಂದ ನಿಡುವಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮರ್ಕಲ್ ನಿಡುವಳೆ ಗ್ರಾಮದ 70ಕ್ಕೂ ಹೆಚ್ಚು ಗ್ರಾಮಸ್ಥರು 94 ಸಿ ಯಲ್ಲಿ ಅರ್ಜಿ ಸಲ್ಲಿಸಿದ್ದು ಅದರಲ್ಲಿ 30 ಜನರು ಸರ್ಕಾರಕ್ಕೆ ಹಣವನ್ನು ಪಾವತಿ ಮಾಡಿದ್ದಾರೆ ಆದರೆ ಮೂಡಿಗೆರೆ ತಾಸಿಲ್ದಾರ್ ಅವರು ಹಕ್ಕುಪತ್ರ ನೀಡಲು ಹಿಂದೇಟು ಹಾಕುತ್ತಿದ್ದು ಇದರಿಂದ ಬೇಸತ್ತು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನವೀನ್ ಹಾವಳಿಯವರು ಮೌನ ಪ್ರತಿಭಟನೆ ಆರಂಭಿಸಿದ್ದಾರೆ.

ಈ ಕುರಿತು ಮಾತನಾಡಿದ ಗ್ರಾಮ ಪಂಚಾಯತ್ ಉಪಾಧ್ಯಕ್ಷ ನವೀನ್ ಹಾವಳಿ ಈ ಭಾಗದಲ್ಲಿ ಕೂಲಿ ಕಾರ್ಮಿಕರೇ ಹೆಚ್ಚಾಗಿ ವಾಸ ಮಾಡುತ್ತಿದ್ದು 94 ಸಿ ಅರ್ಜಿ ಸಲ್ಲಿಸಿ ಎರಡು ವರ್ಷ ಕಳೆದರೂ ಹಕ್ಕುಪತ್ರ ನೀಡದೆ ಅಧಿಕಾರಿಗಳು ಮೀನಾ ಮೇಷ ಎಣಿಸುತ್ತಿದ್ದಾರೆ ಗ್ರಾಮಸ್ಥರು ಕಚೇರಿಗಳಿಗೆ ಅಲೆದು ಅಲೆದು ರೋಸಿ ಹೋಗಿದ್ದಾರೆ. ಇದರಿಂದ ಖುದ್ದಾಗಿ ನಾನೇ ಬಂದರು ಮೂಡಿಗೆರೆ ತಾಲೂಕು ಕಚೇರಿಯಲ್ಲಿ ಯಾವುದೇ ಕೆಲಸ ಕಾರ್ಯಗಳು ನಡೆಯುತ್ತಿಲ್ಲ ಅದರಿಂದ ಬೇಸತ್ತು ಮೌನ ಪ್ರತಿಭಟನೆ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Exams; ಇನ್ನು ಎಸ್ಎಸ್ಎಲ್ ಸಿ ಮತ್ತು ಪಿಯುಸಿಗೆ ಮೂರು ವಾರ್ಷಿಕ ಪರೀಕ್ಷೆ; ಇಲ್ಲಿದೆ ಮಾಹಿತಿ

Advertisement

Udayavani is now on Telegram. Click here to join our channel and stay updated with the latest news.

Next