Advertisement

Moodigere; ಬಿಜೆಪಿ ಕಾರ್ಯಕರ್ತರೊಳಗಿನ ಅಸಮಾಧಾನ ಸ್ಫೋಟ: ಓರ್ವ ಆಸ್ಪತ್ರೆಗೆ

11:31 PM Feb 09, 2024 | Team Udayavani |

ಮೂಡಿಗೆರೆ: ಚಿಕ್ಕಮಗಳೂರು ಜಿಲ್ಲೆ ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿದ್ದು, ತಾಲೂಕಿನ ವಿವಿಧ ಮಂಡಲ, ಮೋರ್ಚಾ ಅಧ್ಯಕ್ಷರ ನೇಮಕ ವಿಚಾರದಲ್ಲಿ ಅಸಮಾಧಾನ ಸ್ಪೋಟಗೊಂಡು ಪರಸ್ಪರ ಹೊಡೆದಾಟ ನಡೆದು ಓರ್ವ ಆಸ್ಪತ್ರೆಗೆ ಸೇರಿದ ಘಟನೆ ಶುಕ್ರವಾರ ನಡೆದಿದೆ.

Advertisement

ಮೂಡಿಗೆರೆ ತಾಲೂಕು ಅಧ್ಯಕ್ಷರ ನೇಮಕ ವಿಚಾರದಲ್ಲಿ ಬಿಜೆಪಿ ಒಳ ಜಗಳ ಬೀದಿಗೆ ಬಂದಿದ್ದು, 12 ಜನ ಆಕಾಂಕ್ಷಿಗಳು ಕಣದಲ್ಲಿದ್ದರು, ಮೂಡಿಗೆರೆ ತಾಲೂಕಿನ ಬಿಜೆಪಿ ಅಧ್ಯಕ್ಷರಾಗಿ ಟಿ.ಎಂ.ಗಜೇಂದ್ರ ಆಯ್ಕೆಯಾಗಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ ಅವರಿಂದ ನೂತನ ಅಧ್ಯಕ್ಷರ ಹೆಸರು ಘೋಷಣೆ ಆಗುತ್ತಿದ್ದಂತೆ ಅಸಮಾಧಾನ ಸ್ಫೋಟಗೊಂಡಿದ್ದು, ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷ ಕೆ.ಸಿ.ರತನ್ ಮೇಲೆ ಹಲ್ಲೆ ನಡೆಸಲಾಗಿದೆ.

ಕೆ.ಸಿ.ರತನ್ ಹಸ್ತ ಕ್ಷೇಪದಿಂದ ಅಧ್ಯಕ್ಷ ಸ್ಥಾನ ಕೈತಪ್ಪಿದೆ ಎಂದು ಹಲ್ಲೆ ನಡೆಸಲಾಗಿದೆ. ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಪುಟ್ಟಣ್ಣ ಹಾಗೂ ಮತ್ತೋರ್ವ ಆಕಾಂಕ್ಷಿ ಭರತ್ ಎಂಬವರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ತೀವ್ರ ಹಲ್ಲೆಗೆ ಒಳಗಾಗಿರುವ ಕೆ.ಸಿ. ರತನ್ ಮೂಡಿಗೆರೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next