Advertisement

ಮೂಡಿಗೆರೆ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು : ಉಡುಪಿ ಮೂಲದ ಪ್ರಯಾಣಿಕರು ಪಾರು

12:19 PM Aug 01, 2021 | Team Udayavani |

ಮೂಡಿಗೆರೆ : ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದವರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾದ ಘಟನೆ ಮೂಡಿಗೆರೆ ತಾಲೂಕಿನ ನೀರು ಗಂಡಿಯಲ್ಲಿ ರವಿವಾರ ಸಂಭವಿಸಿದೆ.

Advertisement

ಕಾರಿನಲ್ಲಿದ್ದವರು ಉಡುಪಿ ಮೂಲದವರು ಎನ್ನಲಾಗಿದೆ, ಚಿಕ್ಕಮಗಳೂರಿನಿಂದ ಉಡುಪಿ ಕಡೆಗೆ ಪ್ರಯಾಣಿಸುತ್ತಿದ್ದ ಕಾರು ನೀರು ಗಂಡಿ ಸಮೀಪಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡಿದ್ದು ಪ್ರಯಾಣಿಕರು ಅದೃಷ್ಟವಶಾತ್ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.

ಅಪಘಾತ ವಲಯವಾದ ನೀರು ಗಂಡಿ :
ಕಾರು ಅಪಘಾತವಾದ ನೀರು ಗಂಡಿ ಈ ಸ್ಥಳದಲ್ಲಿ ವರ್ಷದಲ್ಲಿ ಹಲವಾರು ಅಪಘಾತಗಳು ಸಂಭವಿಸುತ್ತವೆ ಎನ್ನಲಾಗಿದೆ. ಸಂಬಂಧ ಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಬೇಕಾಗಿದೆ.

ಇದನ್ನೂ ಓದಿ ;ಚಿಕ್ಕಮಗಳೂರು: ಜಮೀನಿಗೆ ಹಾಕಿದ್ದ ತಂತಿ ಬೇಲಿಯ ವಿದ್ಯುತ್ ಸ್ಪರ್ಶಿಸಿ ಕಾಡಾನೆ ಸಾವು

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next