Advertisement

ಮೂಡುಬಿದಿರೆ : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ, ಪ್ರಯಾಣಿಕರು ಪಾರು

08:55 AM Aug 03, 2022 | Team Udayavani |

ಮೂಡುಬಿದಿರೆ : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪಲ್ಟಿಯಾಗಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಘಟನೆ ಮೂಡುಬಿದಿರೆ ಸಮೀಪದ ಬನ್ನಡ್ಕದ ರಾಘವೇಂದ್ರ ಮಠದ ಬಳಿ ಬುಧವಾರ ಬೆಳಿಗ್ಗೆ ಸಂಭವಿಸಿದೆ.

Advertisement

ಮಂಗಳೂರಿನಿಂದ ಮೂಡುಬಿದಿರೆ ಮಾರ್ಗವಾಗಿ ಕಾರ್ಕಳ ಕಡೆಗೆ ಹೋಗುತಿದ್ದ ಖಾಸಗಿ ಬಸ್ಸು ಬನ್ನಡ್ಕದ ರಾಘವೇಂದ್ರ ಮಠದ ಮುಂಭಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಈ ವೇಳೆ ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಕಾರ್ಖಾನೆಯಲ್ಲಿ ಅನಿಲ ಸೋರಿಕೆ : 50ಕ್ಕೂ ಅಧಿಕ ಕಾರ್ಮಿಕರು ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next