Advertisement

ಮೂಡುಬಿದಿರೆ : ಶಾಲಾ ಬಸ್ –ಕಾರು ನಡುವೆ ಅಪಘಾತ, ಚಾಲಕನ ಸ್ಥಿತಿ ಗಂಭೀರ

06:11 PM Nov 02, 2022 | Team Udayavani |

ಮೂಡುಬಿದಿರೆ : ಅಲಂಗಾರು ಸೈಂಟ್ ಥಾಮಸ್ ಶಾಲಾ ವಾಹನಕ್ಕೆ ಕಾರೊಂದು ಢಿಕ್ಕಿ ಹೊಡೆದು ಕಾರಿನ ಚಾಲಕ ಗಂಭೀರ ಗಾಯಗೊಂಡಿರುವ ಘಟನೆ ಅಲಂಗಾರು ಬಳಿ ರಾಷ್ಟ್ರೀಯ ಹೆದ್ದಾರಿ 169 ರಲ್ಲಿ ಬುಧವಾರ ಸಂಜೆ ಸಂಭವಿಸಿದೆ.

Advertisement

ಘಟನೆಯಲ್ಲಿ ಶಾಲಾ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.

ಮೂಡುಬಿದಿರೆ ಆಲಂಗಾರಿನ ಸೈಂಟ್ ಥಾಮಸ್ ಆಂಗ್ಲ ಮಾಧ್ಯಮ ಶಾಲೆಯ ಬಸ್ ಮಕ್ಕಳನ್ನು ಮನೆಗೆ ಬಿಡಲು ಬೆಳುವಾಯಿ ಕಡೆಗೆ ಹೋಗುತ್ತಿದ್ದಾಗ ಕಾರ್ಕಳದಿಂದ ಮೂಡುಬಿದಿರೆ ಕಡೆಗೆ ಅತೀ ವೇಗದಿಂದ ಬರುತ್ತಿದ್ದ ಕೆಎ 09 ಝೆಡ್ 7481 ನಂಬರಿನ ಕಾರು ಆಲಂಗಾರು ಬಳಿ ಒಮ್ಮೆಲೆ ಬ್ರೇಕ್ ಹಾಕಿ ಬಲಕ್ಕೆ ತಿರುಗಿ ಶಾಲಾ ವಾಹನದ ಕಡೆಗೆ ಬಂದಿದೆ .ಆಗ ಶಾಲಾ ವಾಹನದ ಚಾಲಕ ಬಸ್ಸನ್ನು ಎಡ ಬದಿಗೆ ತಿರುಗಿಸಿದ್ದು ಈ ವೇಳೆ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ನಿಂತಿದೆ ಇದೇ ವೇಳೆ ವೇಗವಾಗಿ ಬಂದ ಕಾರು ಬಸ್ಸಿಗೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾರಿನ ಚಾಲಕನ ಮೂಗು ಮತ್ತು ಕಿವಿಯಿಂದ ರಕ್ತ ಹರಿಯುತ್ತಿತ್ತು ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.

ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಇನ್ನೋರ್ವ ವ್ಯಕ್ತಿಗೂ ಗಾಯಗಳಾಗಿದೆ. ಶಾಲಾ ವಾಹನದ ಮುಂಭಾಗವು ಸಂಪೂರ್ಣ ಜಖಂಗೊಂಡಿದೆ.

ಇದನ್ನೂ ಓದಿ : ಕಾಸರಗೋಡು :ಸಂಗೀತವನ್ನು ಆಲಿಸಿ; ಆನಂದಿಸುತ್ತಿರುವ ಗೋವು

Advertisement
Advertisement

Udayavani is now on Telegram. Click here to join our channel and stay updated with the latest news.

Next