Advertisement
ಈ ಸಂದರ್ಭ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಮೋಪಾ ನಿಲ್ದಾಣಕ್ಕೆ ಭೂಮಿ ಕಳೆದುಕೊಂಡವರಿಗೆ ಸರಕಾರ ಪರಿಹಾರ ನೀಡಲಿದೆ. ಆದ್ದರಿಂದ, ಅಂತಹ ನಾಗರಿಕರು ನಿಶ್ಚಿಂತರಾಗಿರಬೇಕು. ಯೋಜನೆಗೆ ವಿರೋಧ ವ್ಯಕ್ತಪಡಿಸಿದವರ ಬೇಡಿಕೆಗಳನ್ನೂ ಈಡೇರಿಸಲಾಗಿದೆ. ಹೀಗಾಗಿ ಈ ಯೋಜನೆಗೆ ಯಾವುದೇ ಅಡ್ಡಿಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ನುಡಿದರು.
ಮುಖ್ಯಮಂತ್ರಿಗಳು ಮೋಪಾ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆಗೆ ತೆರಳಿದಾಗ ಈ ಭೇಟಿಗೆ ಸ್ಥಳೀಯ ಶಾಸಕರಿಗೆ ಆಹ್ವಾನ ನೀಡಿಲ್ಲ ಎಂದು ಜಿಲ್ಲಾ ಪಂಚಾಯಿತಿ, ಪಂಚಾಯಿತಿ ಸದಸ್ಯರು ಪ್ರವೇಶ ದ್ವಾರಕ್ಕೆ ಬ್ಯಾರಿಕೇಡ್ ಹಾಕಿದರು. ಇದಾದ ಬಳಿಕ ನೇರವಾಗಿ ಶಾಸಕ ಪ್ರವೀಣ್ ಅರ್ಲೇಕರ್ ಅವರ ನಿವಾಸಕ್ಕೆ ಆಗಮಿಸಿದ ಮುಖ್ಯಮಂತ್ರಿಗಳು, ಮಧ್ಯಾಹ್ನದ ವೇಳೆಗೆ ಶಾಸಕ ಪ್ರವೀಣ್ ಅರ್ಲೇಕರ್ ಅವರೊಂದಿಗೆ ಮುಖ್ಯಮಂತ್ರಿಗಳು ಮೋಪಾ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
Related Articles
Advertisement