Advertisement

“ನೈತಿಕತೆ ಆಧಾರಿತ ರಾಜಕೀಯದಿಂದ ಸಮಾಜ ನಿರ್ಮಾಣ ಸಾಧ್ಯ’

09:47 PM Sep 13, 2019 | Sriram |

ಹಿರಿಯಡಕ (ಹೆಬ್ರಿ): ಇತ್ತೀಚಿನ ದಿನಗಳಲ್ಲಿ ರಾಜಕೀಯ ಎಂಬ ಪರಿಕಲ್ಪನೆಯು ನಕಾರಾ ತ್ಮಕವಾಗಿ ಬಿಂಬಿತವಾಗುತ್ತಿದ್ದು ಈ ದಷ್ಟಿಕೋನವನ್ನು ಬದಲಾಯಿಸಲು ಮತ್ತು ಮೌಲ್ಯಯುತ ಸಮಾಜ ನಿರ್ಮಿಸಲು ನೈತಿಕತೆ ಮತ್ತು ವೈಚಾರಿಕತೆ ಆಧಾರಿತ ರಾಜಕೀ ಯದಿಂದ ಮಾತ್ರ ಸಾಧ್ಯ ಎಂದು ಉಡುಪಿ ಎಂ.ಜಿ.ಎಂ. ಕಾಲೇಜಿನ ಪೊ| ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಹೇಳಿದರು.

Advertisement

ಉಡುಪಿ ಜಿಲ್ಲೆ ಕನ್ನಡ ಸಾಹಿತ್ಯ ಪರಿಷತ್‌, ಉಡುಪಿ ತಾಲೂಕು ಘಟಕ, ಉಡುಪಿ ಜಿಲ್ಲಾ ಲೇಖಕಿಯರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಹಿರಿಯಡಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ದಿ| ಪುಳಿಮಾರು ಎಂ. ಕೃಷ್ಣ ಶೆಟ್ಟಿ ಸ್ಮಾರಕ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ| ನಿಕೇತನ ಅವರು ಮಾತನಾಡಿ ಸಾಹಿತ್ಯ ಮತ್ತು ರಾಜಕೀಯ ಪರಸ್ಪರ ಪೂರಕವಾಗಿ ಕಾರ್ಯನಿರ್ವಹಿಸಿದರೆ ಸಮಾಜದಲ್ಲಿ ಸಂವೇದನಾ ಶೀಲತೆ ಮೂಡಿಸಲು ಸಾಧ್ಯ ಎಂದರು.

ಉಡುಪಿ ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ನೀಲಾವರ ಸುರೇಂದ್ರ ಅಡಿಗ ಮತ್ತು ಉಡುಪಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷೆ ಬ್ರಹ್ಮಾವರ ವಸಂತಿ ಶೆಟ್ಟಿ ಮತ್ತು ಕಾಲೇಜಿನ ಪ್ರಾಂಶುಪಾಲ ಅವರನ್ನು ಸಮ್ಮಾನಿಸಲಾಯಿತು. ಪುಳಿಮಾರು ಮನೆಯ ಭವಾನಿ ಶೆಟ್ಟಿ, ಸಾಹಿತ್ಯ ಪರಿಷತ್‌ನ ನಾರಾಯಣ ಮಡಿ, ಭುವನ ಪ್ರಸಾದ್‌ ಹೆಗಡೆ ಮೊದಲಾದವರು ಉಪಸ್ಥಿತರಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸುಜಯಾ ಕೆ.ಎಸ್‌. ಸ್ವಾಗತಿಸಿದರು. ಬ್ರಹ್ಮಾವರ ಗಣೇಶ್‌ ಕಾರ್ಯಕ್ರಮ ನಿರೂಪಿಸಿದರು. ಮುರಳೀಧರ್‌ ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next