Advertisement

ಕುತ್ಯಾರು: 18ಕೋ.93 ಲ.ರೂ.ವೆಚ್ಚದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಟ್ಟಡಕ್ಕೆ ಶಿಲಾನ್ಯಾಸ

02:58 PM Nov 13, 2020 | sudhir |

ಶಿರ್ವ: ಸುಮಾರು 18 ಕೋ.93 ಲ.ರೂ. ವೆಚ್ಚದಲ್ಲಿ ಕುತ್ಯಾರು ಇರಂದಾಡಿ ಆನೆಗುಂದಿ ಮಠದ ಬಳಿ ನಿರ್ಮಾಣಗೊಳ್ಳಲಿರುವ ಸಮಾಜ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಿಕ್ಷಣ ಶಾಲೆಯ ಕಟ್ಟಡಕ್ಕೆ ಕಾಪು ಕ್ಷೇತ್ರದ ಶಾಸಕ ಲಾಲಾಜಿ ಆರ್‌. ಮೆಂಡನ್‌ ಶುಕ್ರವಾರ ಶಿಲಾನ್ಯಾಸ ನೆರವೇರಿಸಿದರು.

Advertisement

ಬಳಿಕ ನಡೆದ ಸರಳ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ ಗ್ರಾಮೀಣ ಪ್ರದೇಶದ ಹಿಂದುಳಿದ ,ಪರಿಶಿಷ್ಟ ಜಾತಿ ಮತ್ತು ಪಂಗಡದ ಬಡ ಮಕ್ಕಳ ಶಿಕ್ಷಣಕ್ಕಾಗಿ ಹಲವಾರು ವರ್ಷಗಳ ಬೇಡಿಕೆಯಾಗಿದ್ದ ಶಾಲೆಯ ಕಟ್ಟಡವು ಭರವಸೆಯಾಗಿಯೇ ಉಳಿದಿತ್ತು. ಇದೀಗ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರ ನೇತೃತ್ವದ ಸರಕಾರ ಅನುದಾನ ಬಿಡುಗಡೆ ಮಾಡಿದ್ದು ಶಿಲ್ಯಾನ್ಯಾಸ ನೆರವೇರಿಸಲಾಗಿದೆ ಎಂದು ಹೇಳಿದರು.

ಮುಖ್ಯ ಅತಿಥಿ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್‌ ಮಾತನಾಡಿ ಕುತ್ಯಾರು ಗ್ರಾಮೀಣ ಭಾಗಕ್ಕೆ ಆಂಗ್ಲ ಮಾಧ್ಯಮ ವಸತಿ ಶಾಲೆಯಂತಹ ಸರಕಾರದ ಬಲುದೊಡ್ಡ ಯೋಜನೆ ದೊರಕಿದ್ದು ಊರಿನ ಸೌಭಾಗ್ಯವಾಗಿದೆ. ಹಿಂದುಳಿದ ವರ್ಗ,ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಇದರಿಂದ ಅನುಕೂಲವಾಗಲಿದ್ದು ಆ ಮೂಲಕ ಗ್ರಾಮದ ಅಭಿವೃದ್ಧಿಯಾಗಲಿದೆ ಎಂದು ಹೇಳಿದರು.

ಇದನ್ನೂ ಓದಿ:ಗ್ರಾಮಪಂಚಾಯತಿ ಚುನಾವಣೆಗೆ ಅಸ್ತು ಎಂದ ಹೈಕೋರ್ಟ್: 3 ವಾರದಲ್ಲಿ ವೇಳಾಪಟ್ಟಿ ಪ್ರಕಟಿಸಲು ಸೂಚನೆ

Advertisement

ಕಾರ್ಯಕ್ರಮದಲ್ಲಿ ಕಾಪು ತಹಶೀಲ್ದಾರ್‌ ಮಹಮ್ಮದ್‌ ಇಸಾಕ್‌, ಜಿ.ಪಂ. ಸದಸ್ಯೆ ಶಿಲ್ಪಾ ಜಿ. ಸುವರ್ಣ, ಕಾಪು ತಾ.ಪಂ. ಅಧ್ಯಕ್ಷೆ ಶಶಿಪ್ರಭಾ ಎಸ್‌. ಶೆಟ್ಟಿ,ಜಿಲ್ಲಾ ಸಮಾಜ ಕಲ್ಯಾಣ ಉಪನಿರ್ದೇಶಕ ಪ್ರೇಮ್‌ ಸಾಗರ್‌, ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ರಮೇಶ್‌ಎಸ್‌.ಎನ್‌, ಕುತ್ಯಾರು ಗ್ರಾ.ಪಂ. ಆಡಳಿತಾಧಿಕಾರಿ ಡಾ| ಅರುಣ್‌ ಕುಮಾರ್‌ ಹೆಗ್ಡೆ, ಕುತ್ಯಾರು ಗ್ರಾ. ಪಂ.ಮಾಜಿ ಅಧ್ಯಕ್ಷ ಧೀರಜ್‌ ಶೆಟ್ಟ,ಪಿಡಿಒ ರಜನಿ ಭಟ್‌, ಗ್ರಾಮ ಕರಣಿಕ ಪ್ರದೀಪ್‌,ಕುತ್ಯಾರು ಗ್ರಾ.ಪಂ. ಮಾಜಿ ಸದಸ್ಯರು, ಗುತ್ತಿಗೆದಾರ ದಯಾನಂದ ಶೆಟ್ಟಿ,ಶಾಲೆಯ ಸಿಬಂದಿ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

ಕುತ್ಯಾರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಭಾರ ಪ್ರಾಂಶುಪಾಲೆ ಅಪರ್ಣಾ ಭಟ್‌ ಸ್ವಾಗತಿಸಿದರು. ಜಿಲ್ಲಾ ಸಮನ್ವಯಾಧಿಕಾರಿ ಚಂದ್ರಶೇಖರ್‌ ಬಿ. ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next