ಶಿವಮೊಗ್ಗ : ಪರಪ್ಪನ ಅಗ್ರಹಾರದಲ್ಲಿ ಅಕ್ರಮ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿ, ನಮ್ಮ ಗಮನಕ್ಕೆ ಬಂದಾಗ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದೇವೆ. ಬಂಧಿಖಾನೆಗಳ ಮೇಲೆ ನಿಗಾ ಇಡಲು ಸೂಚನೆ ನೀಡಿದ್ದೇವೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಶುಕ್ರವಾರ ಹೇಳಿಕೆ ನೀಡಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಅಧಿಕಾರಿಗಳ ಸಭೆ ನಡೆಸಿದ್ದೇನೆ.ಶಿವಮೊಗ್ಗದಲ್ಲಿ ಕಾನೂನು ಪಾಲನೆ ಸುವ್ಯವಸ್ಥೆಗೆ ಇನ್ನೂ ಹೆಚ್ಚಿನ ಕ್ರಮವಾಗಬೇಕಿದೆ.
ಅಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿದ್ದೇವೆ.ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇಡಲು ಸೂಚನೆ ನೀಡಿದ್ದು, ಸಣ್ಣ ಘಟನೆಗಳಿಗೂ ಸ್ಪಂದಿಸಲು ಸೂಚನೆ ನೀಡಲಾಗಿದೆ ಎಂದರು.
ಹೊಟೇಲ್ ಗಳಲ್ಲಿ ಭದ್ರತೆ ವ್ಯವಸ್ಥೆ ಅಳವಡಿಸಲು ಸೂಚನೆ ನೀಡಲಾಗಿದೆ. ಬಹುತೇಕ ಐಷಾರಾಮಿ ಹೋಟೆಲ್, ಮಾಲ್ ಗಳಲ್ಲಿ ತರಬೇತಿ ಇರುವ ಭದ್ರತಾ ಸಿಬ್ಬಂದಿ ಇಲ್ಲ.ಸಿಸಿಟಿವಿ ಕ್ಯಾಮೆರಾ ಕೂಡ ಸಮರ್ಪಕವಿಲ್ಲ.ಪಾಲಿಕೆ ವ್ಯಾಪ್ತಿಗಳಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಎಲ್ಲ ಹೋಟೆಲ್, ಮಾಲ್ ಗಳು ಕೇಂದ್ರೀಯ ಪಬ್ಲಿಕ್ ಸೆಕ್ಟರ್ ಕಾಯ್ದೆ ಪಾಲಿಸಬೇಕು ಎಂದು ಎಡಿಜಿಪಿ ಸೂಚನೆ ನೀಡಿದರು.
ಪರಪ್ಪನ ಅಗ್ರಹಾರದಲ್ಲಿ ಶಿವಮೊಗ್ಗದ ಹರ್ಷ ಹತ್ಯೆ ಆರೋಪಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎನ್ನುವ ಕುರಿತಾಗಿನ ವಿಡಿಯೋ ಗಳು ಭಾರಿ ವೈರಲ್ ಆಗಿ ಚರ್ಚೆಗೆ ಕಾರಣವಾಗಿದ್ದು, ಪೊಲೀಸ್ ವ್ಯವಸ್ಥೆಯ ಕುರಿತು ಪ್ರಶ್ನೆ ಮೂಡಿಸಿದ್ದವು.