Advertisement

ದಾವಣಗೆರೆಯಲ್ಲಿ ‌ಮತ್ತಷ್ಟು ಪ್ರಕರಣಗಳು ಹೆಚ್ಚಾಗಲಿವೆ: ಉಸ್ತುವಾರಿ ಸಚಿವ ಬಿ.ಎ. ಬಸವರಾಜ್

08:07 AM May 06, 2020 | keerthan |

ದಾವಣಗೆರೆ: ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಕೋವಿಡ್-19 ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ‌ಮತ್ತಷ್ಟು ಪ್ರಕರಣಗಳು ಹೆಚ್ಚಾಗಲಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ. ಬಸವರಾಜ್ ಹೇಳಿದ್ದಾರೆ.

Advertisement

ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ಅವರು ಈ ವಿಷಯ  ಹೇಳಿದರು. ನಿನ್ನೆ ಸಂಜೆ ಜಿಲ್ಲಾಧಿಕಾರಿ, ಆರೋಗ್ಯ ಇಲಾಖೆ ಅಧಿಕಾರಿಗಳ ಜತೆ ನಡೆಸಿದ ಸಭೆಯಲ್ಲಿ ಅಧಿಕಾರಿಗಳು ಕೋವಿಡ್-19 ಸೋಂಕಿನ ಮತ್ತಷ್ಟು ಪ್ರಕರಣಗಳ ವರದಿ ಬರುವ ಸಾಧ್ಯತೆ ಇದೆ ಎಂಬುದಾಗಿ ತಿಳಿಸಿದ್ದಾರೆ ಎಂದರು.

ಕಳೆದ ಬಾರಿ ಬಂದಾಗ ಗ್ರೀನ್ ಝೋನ್ ಎಂಬುದಾಗಿ ಘೋಷಣೆಗೆ ಒತ್ತಾಯಿಸಿದ್ದರು. ಈಗ ಪಾಸಿಟಿವ್ ಕೇಸ್ ಗಳು ಹೆಚ್ಚಾಗಿರುವುದು ಸಾಕಷ್ಟು ನೋವಾಗಿದೆ. ಯಾರೂ ಕೂಡ ಮನೆಯಿಂದ ಹೊರ ಬರಬಾರದು ಎಂದು ಮನವಿ ಮಾಡಿದ್ದಾರೆ. ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಯ ಮನವಿಗೆ ಸ್ಪಂದಿಸಿ ಎಂದು ಅವರು ಕೋರಿದರು.

ಈಗಾಗಲೇ ಕೇಂದ್ರ ಸರ್ಕಾರದ ಜಿಲ್ಲೆಯಲ್ಲಿ ಕೋವಿಡ್-19 ಲ್ಯಾಬ್ ಗೆ ಅನುಮತಿ ‌ನೀಡಿದೆ. ಇನ್ನೆರಡು ದಿನಗಳಲ್ಲಿ ಜಿಲ್ಲೆಯಲ್ಲಿ ಕೋವಿಡ್ ಲ್ಯಾಬ್ ಬರಲಿದೆ ಎಂದು ಉಸ್ತುವಾರಿ ಸಚಿವರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next