Advertisement

ಬಿಜೆಪಿ ಸಂಘಟನೆಗೆ ಹೆಚ್ಚಿನ ಒತ್ತು: ಸಂಸದ ಅಣ್ಣಾಸಾಹೇಬ ಜೊಲ್ಲೆ

06:15 PM Jan 03, 2023 | Team Udayavani |

ಚಿಕ್ಕೋಡಿ: ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಎಂಟು ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ವಶದಲ್ಲಿ ಇರುವ ಕ್ಷೇತ್ರದಲ್ಲಿ ಬಿಜೆಪಿ ಬಾವುಟ ಹಾರಿಸಲು ರಣತಂತ್ರ ರೂಪಿಸಲಾಗಿದೆ. ಎಲ್ಲ ಬಿಜೆಪಿ ಕಾರ್ಯಕರ್ತರು ಒಗ್ಗಟ್ಟಾಗಿ ದುಡಿಯಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನಪ್ರಿಯ ಯೋಜನೆಗಳ ಮಾಹಿತಿ ಜನರಿಗೆ ತಿಳಿಸುವ ಮೂಲಕ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.

Advertisement

ತಾಲೂಕಿನ ನನದಿ ಗ್ರಾಮದಲ್ಲಿ ನಡೆದ ಬೂತ್‌ ವಿಜಯ ಅಭಿಯಾನ ಕಾರ್ಯಕ್ರಮದಲ್ಲಿ ಮನೆ ಮನೆಗೆ ಬಿಜೆಪಿ ಧ್ವಜ ಅಳವಡಿಸಿ ಮತ್ತು ಪೇಜ್‌ ಪ್ರಮುಖರಿಗೆ ಬೂತ್‌ ಪೇಜ್‌ ಹಸ್ತಾಂತರಿಸಿ ಅವರು ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರು ಜಾರಿ ಮಾಡಿರುವ ಕೃಷಿ ಸಮ್ಮಾನ ಯೋಜನೆ, ಉಜ್ವಲ ಗ್ಯಾಸ್‌, ಜಲ ಜೀವನ ಮಿಷನ್‌ ಕುರಿತು ಜನರಿಗೆ ಮಾಹಿತಿ ನೀಡಬೇಕು.

ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಾರಿ ಮಾಡಿರುವ ರೈತ ಮಕ್ಕಳಿಗೆ ವಿದ್ಯಾನಿಧಿ  ಯೋಜನೆ ಕುರಿತು ಪ್ರತಿ ಮತದಾರರಿಗೆ ತಿಳಿಸುವ ಕೆಲಸ ಮಾಡಬೇಕು. ಬೂತ್‌ ಮಟ್ಟದಲ್ಲಿ ಬಿಜೆಪಿ ಪೇಜ್‌ ಪ್ರಮುಖರ ವ್ಯಾಟ್ಸ್‌ ಆ್ಯಪ್‌ ಗ್ರೂಪ್‌ ಮಾಡಿ ಪ್ರತಿ ಮಾಹಿತಿ ರವಾನಿಸಬೇಕು ಎಂದರು.

ಇಡೀ ರಾಜ್ಯದಲ್ಲಿ ಬಿಜೆಪಿ ಪರ ಅಲೆಯಿದ್ದು, 2023 ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭಾರಿ ಬಹುಮತದಿಂದ ಅಧಿ ಕಾರದ ಗದ್ದುಗೆ ಹಿಡಿಯಲಿದೆ. ಚಿಕ್ಕೋಡಿ-ಸದಲಗಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲುವುದು ಶತಸಿದ್ಧ ಎಂದರು. ವಿಧಾನ ಪರಿಷತ್‌ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಮಾತನಾಡಿ, 2023 ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿ ಕಾರಕ್ಕೆ ಬರಬೇಕೆನ್ನುವ ಉದ್ದೇಶದಿಂದ ಇಡೀ ದೇಶ ಮತ್ತು ರಾಜ್ಯದಲ್ಲಿ ಬೂತ್‌ ವಿಜಯ ಅಭಿಯಾನ ಆರಂಭಗೊಂಡಿದೆ. ಡಬಲ್‌ ಇಂಜನ್‌ ಸರ್ಕಾರದ ಜುನಪರ ಯೋಜನೆಗಳ ಕುರಿತು ಪ್ರತಿ ಬೂತ್‌ ಮಟ್ಟದಲ್ಲಿ ಜನರಿಗೆ ತಿಳಿಸುವ ಮೂಲಕ ಬಿಜೆಪಿ ಅಧಿಕಾರಕ್ಕೆ ತರಲು ಎಲ್ಲರೂ ಒಗ್ಗಟ್ಟಾಗಿ ದುಡಿಯಬೇಕು ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಡಾ| ರಾಜೇಶ ನೇರ್ಲಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆ ಮೇಲೆ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ದುಂಡಪ್ಪ ಬೆಂಡವಾಡೆ, ಅಪ್ಪಾಸಾಹೇಬ ಚೌಗಲೆ, ಸಂಜಯ ಚೌಗಲೆ, ಸತೀಶ ಅಪ್ಪಾಜಿಗೋಳ, ವಿಜಯಸಿಂಹ ನಿಂಬಾಳ್ಕರ, ಮಿಥುನ ದೇಶಪಾಂಡೆ ಮುಂತಾದವರು ಇದ್ದರು. ಚಿಕ್ಕೋಡಿ-ಸದಲಗಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿ ಸಲು ಕಾರ್ಯಕರ್ತರು ಹಗಲಿರುಳು ಕೆಲಸ ಮಾಡುತ್ತಿದ್ದಾರೆ. ಪ್ರತಿ ಬೂತ್‌ದಲ್ಲಿ 30 ಜನರಿಗೆ ಸರ್ಕಾರದ ಸಾಧನೆ ತಿಳಿಸುವ ಕೆಲಸ ಮಾಡಬೇಕೆಂದು ಬಿಜೆಪಿ ಬೂತ್‌ ವಿಜಯ ಅಭಿಯಾನ ಹಮ್ಮಿಕೊಂಡಿದೆ. ಈ ಅಭಿಯಾನ ಜ. 2 ರಿಂದ 12ರವರಿಗೆ ನಡೆಯಲಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next