ಸಕಲೇಶಪುರ: ಈ ಬಾರಿಯ ಬಜೆಟ್‌ನಲ್ಲಿ ಗ್ರಾಮೀಣ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಅನುದಾನ ಕೊಡುವ ನಿರೀಕ್ಷೆಯಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ತಾಲೂಕಿನ ದೇವಾಲದಕೆರೆ ಪಂಚಾಯತಿ ವ್ಯಾಪ್ತಿಯಬಣಾಲು ಗ್ರಾಮದಲ್ಲಿ ಮಾತನಾಡಿದ ಅವರು, ಗ್ರಾಮದಲ್ಲಿನಿರ್ಮಾಣವಾಗಿರುವ ರೆಸಾರ್ಟ್‌ವೊಂದರ ಉದ್ಘಾಟನೆಗೆ ಇಲ್ಲಿಗೆ ಆಗಮಿಸಿದ್ದೇನೆ. ಮಲೆನಾಡಿನಲ್ಲಿ ರಸ್ತೆ ಸಮಸ್ಯೆ ಬಗ್ಗೆನನಗೆ ಅರಿವಿದೆ. ಮುಂಬರುವ ರಾಜ್ಯ ಬಜೆಟ್‌ನಲ್ಲಿ ನನ್ನ ಇಲಾಖೆಗೆ ಹೆಚ್ಚಿನ ಅನುದಾನ ಕೊಡುವ ನಿರೀಕ್ಷೆಯಿದೆ ಎಂದು ಹೇಳಿದರು.
ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ನಾನು ಹೆಚ್ಚಿನ ಅನುದಾನ ಮೀಸಲಿಡುತ್ತೇನೆ. ತಾಲೂಕಿನಲ್ಲಿ ಬಿಜೆಪಿ ಸಂಘಟನೆ ಕುಂಠಿತಗೊಂಡಿಲ್ಲ, ಇತ್ತೀಚೆಗಷ್ಟೇ ನಡೆದ ಗ್ರಾ.ಪಂ ಚುನಾವಣೆಯಲ್ಲಿ ಪಕ್ಷ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿಕಾರ್ಯಗಳ ಜೊತೆಗೆ ಪಕ್ಷದ ಸಂಘಟನೆ ನಡೆಯುತ್ತಿದೆ. ಮುಂಬರುವ ಜಿ.ಪಂ ಹಾಗೂ ತಾ.ಪಂ. ಚುನಾವಣೆಯನ್ನೂ ಎದುರಿಸುತ್ತೇವೆ. ಈಗಾಗಲೇ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ ಎಂದರು. ಈ ವೇಳೆ ಕಿಡ್ನಿ ವೈಫಲ್ಯದಿಂದ ನರಳುತ್ತಿರುವ ಗ್ರಾಮದ ಪ್ರಾಪ್ತಿ ಎಂಬ ಹುಡುಗಿಯ ಪೋಷಕರು ನೆರವಿಗೆ ಮನವಿ ಸಲ್ಲಿಸಿದರು.
ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಗೋಪಾಲಯ್ಯ ಅವರನ್ನು ಭೇಟಿ ಮಾಡಲು ಹೇಳಿದರು.
ಯಸಳೂರು ತೆಂಕಲಗೋಡು ಮಠದ ಚನ್ನಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಆಗಮಿಸಿ ಮಠದ ಅಭಿವೃದ್ಧಿಗೆ ನೆರವು ನೀಡುವಂತೆ ಮನವಿ ಮಾಡಿದರು. ಬಿಜೆಪಿ ತಾಲೂಕು ಅಧ್ಯಕ್ಷಮಂಜುನಾಥ್ ಸಂ , ತಾಪಂ ಅಧ್ಯಕ್ಷ ಸಿಮೆಂಟ್‌ಮಂಜುನಾಥ್, ಬಿಜೆಪಿ ತಾಲೂಕು ಪ್ರಧಾನ ಕಾರ್ಯದರ್ಶಿ ಸಂದೇಶ್, ಪಕ್ಷದ ಕಾರ್ಯಕರ್ತರಾದ ಕ್ಯಾಮನಹಳ್ಳಿ ಮಹೇಂದ್ರ, ದೇವಾಲದಕೆರೆ ಪ್ರಸನ್ನ ಮುಂತಾದವರು ಉಪಸ್ಥಿತರಿದ್ದರು.