Advertisement

ಬೈಂದೂರು ಕ್ಷೇತ್ರಕ್ಕೆ ಇನ್ನಷ್ಟು ಹೆಚ್ಚು ಅನುದಾನ: ಸಚಿವ ಮಾಧುಸ್ವಾಮಿ

10:47 PM Dec 27, 2019 | mahesh |

ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸಂಬಂಧಿಸಿದಂತೆ ಶಾಸಕರು ಹಲವಾರು ಬಾರಿ ಭೇಟಿಯಾಗಿ ಅಹವಾಲು ಸಲ್ಲಿಸಿದ್ದು, ಅದರಂತೆ ಈವರೆಗೆ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ 73.70 ಕೋ.ರೂ. ಅನುದಾನವನ್ನು ಮಂಜೂರು ಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿ ಕ್ಷೇತ್ರಕ್ಕೆ ಇನ್ನಷ್ಟು ಅನುದಾನ ನೀಡುವುದಾಗಿ ಕಾನೂನು, ಸಂಸದೀಯ ಹಾಗೂ ಸಣ್ಣ ನೀರಾವರಿ ಇಲಾಖೆಯ ಸಚಿವ ಜೆ.ಸಿ. ಮಾಧುಸ್ವಾಮಿ ಭರವಸೆ ನೀಡಿದರು.

Advertisement

ಶುಕ್ರವಾರ ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ನೆಂಪುವಿನ ಶಾಸಕರ ಗೃಹ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಹಂತ – ಹಂತವಾಗಿ ಜನರ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದರು.

ಬೈಂದೂರು ತಾಲೂಕು ಕೇಂದ್ರವಾಗಿ ರೂಪುಗೊಂಡಿದ್ದು, ತಾಲೂಕು ನ್ಯಾಯಾಲಯದ ಆರಂಭದ ಕುರಿತಂತೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಬಗ್ಗೆ ಸಂಬಂಧಪಟ್ಟವರ ಬಳಿ ಶಾಸಕರ ಸಮ್ಮುಖದಲ್ಲಿ ಮಾತನಾಡಲಾಗುವುದು. ತಾಲೂಕಿಗೆ ಏನೆಲ್ಲ ಅಗತ್ಯತೆಗಳಿವೆಯೋ ಅದನ್ನು ಹಂತ – ಹಂತವಾಗಿ ಮಂಜೂರು ಮಾಡಲಾಗುವುದು ಎಂದು ಸಚಿವರು ಹೇಳಿದರು.

ಖಾಯಂಗೆ ಮನವಿ
ಇದೇ ಕುಂದಾಪುರ ತಾಲೂಕಿನ ರಾಜ್ಯ ಕಂದಾಯ ಇಲಾಖೆಯ ಗ್ರಾಮಸಹಾಯಕರ ಸಂಘದಿಂದ ಗ್ರಾಮ ಸಹಾಯಕರನ್ನು ಖಾಯಂಗೊಳಿಸಬೇಕು ಎನ್ನುವುದಾಗಿ ಸಚಿವ ಮಾಧುಸ್ವಾಮಿ ಅವರಿಗೆ ಮನವಿ ಸಲ್ಲಿಸಲಾಯಿತು. ಅಹವಾಲು ಆಲಿಸಿದ ಸಚಿವರು, ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು. ಆದರೆ ಈ ಪ್ರಕ್ರಿಯೆ ಕ್ಯಾಬಿನೆಟ್‌ ಮಟ್ಟದಲ್ಲಿ ನಡೆಯಬೇಕು ಎಂದವರು ಹೇಳಿದರು.

ಶಾಸಕ ಬಿ.ಎಂ. ಸುಕುಮಾರ್‌ ಶೆಟ್ಟಿ, ಬಿಜೆಪಿ ಕ್ಷೇತ್ರಾಧ್ಯಕ್ಷ ದೀಪಕ್‌ ಕುಮಾರ್‌ ಶೆಟ್ಟಿ, ಸಣ್ಣ ನೀರಾವರಿ ಇಲಾಖೆಯ ರಾಜ್ಯ ಕಾರ್ಯದರ್ಶಿ ಮೃತ್ಯುಂಜಯ ಸ್ವಾಮಿ, ಇಲಾಖೆಯ ಎಕ್ಸಿಕ್ಯೂಟಿವ್‌ ಎಂಜಿನಿಯರ್‌ ಗೋಕುಲ್‌ದಾಸ್‌ ಮತ್ತಿತರರಿದ್ದರು.

Advertisement

ಸಿಎಂ ಜತೆ ಚರ್ಚೆ
ಸೌದಿಯಲ್ಲಿ ತನ್ನ ಹೆಸರಿನ ನಕಲಿ ಫೇಸ್‌ಬುಕ್‌ ಖಾತೆಯಲ್ಲಿ ಯಾರೋ ಕಿಡಿಗೇಡಿಗಳು ಪೋಸ್ಟ್‌ ಮಾಡಿ, ಅಲ್ಲಿನ ಪೊಲೀಸ್‌ ವಶದಲ್ಲಿರುವ ಬೀಜಾಡಿಯ ಹರೀಶ್‌ ಬಂಗೇರ ಅವರ ಬಿಡುಗಡೆ ಸಂಬಂಧ ರಾಜ್ಯ ಸರಕಾರ ಅನುಸರಿಸಬೇಕಾದ ಅಗತ್ಯ ಕ್ರಮಗಳ ಕುರಿತಂತೆ ಶೀಘ್ರ ಮುಖ್ಯಮಂತ್ರಿಯವರಲ್ಲಿ ಮಾತುಕತೆ ನಡೆಸಲಾಗುವುದು ಎಂದು ಸಚಿವರು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next