Advertisement
ಅವರು ಶನಿವಾರ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೋವಿಡ್ ನಿಯಂತ್ರಣ ಕುರಿತು ಕಾರ್ಕಳ ಹಾಗೂ ಹೆಬ್ರಿ ತಾಲೂಕಿನ ಗ್ರಾಮ ಮಟ್ಟದ ಟಾಸ್ಕ್ಫೋರ್ಸ್ ಸಮಿತಿ ಸದಸ್ಯರುಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಸಂವಾದದ ಮೂಲಕ ಪ್ರಗತಿ ಪರಿಶೀಲನೆ ನಡೆಸಿದರು.
Related Articles
Advertisement
ಪ್ರಧಾನಮಂತ್ರಿಗಳ ಆಶಯ ಹಾಗೂ ಮುಖ್ಯಮಂತ್ರಿಗಳ ಅಭಿಲಾಷೆಯಂತೆ ಗ್ರಾಮೀಣ ಪ್ರದೇಶಗಳಲ್ಲಿ ಕೊರೋನ ನಿಯಂತ್ರಿಸಲು ಟಾಸ್ಕ್ ಫೋರ್ಸ್ ಗಳಿಂದ ಸಾಧ್ಯ. ಕೊರೋನಾ ನಿಯಂತ್ರಣಕ್ಕೆ ಕಠಿನ ಕ್ರಮ ಕೈಗೊಂಡು, ಸೋಂಕು ನಿಯಂತ್ರಿಸುವ ಗೌರವಕ್ಕೆ ಪಾತ್ರವಾಗುವ ಪಂಚಾಯತ್‌ಗಳಿಗೆ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡಿಸಲಾಗುವುದು ಎಂದರು.
ಗ್ರಾಮೀಣ ಪ್ರದೇಶದಲ್ಲಿ ಸೋಂಕು ಕಂಡುಬರುವ ಮನೆಗಳನ್ನು ಸೀಲ್‌ಡೌನ್ ಮಾಡಬೇಕು ಎಂದ ಅವರು, ಸೋಂಕಿತರು ಮನೆಯಿಂದ ಹೊರಬಂದು ಸಾರ್ವಜನಿಕ ಸ್ಥಳ ಸೇರಿದಂತೆ ವಾಣಿಜ್ಯ ಕೇಂದ್ರಗಳಲ್ಲಿ ಸುತ್ತಾಡುವುದನ್ನು ನಿಯಂತ್ರಿಸಲು ವ್ಯಕ್ತಿಯ ಗುರುತಿಗೆ ಕೈಗೆ ಸೀಲ್ ಹಾಕುವಂತೆ ಸೂಚನೆ ನೀಡಿದರು.
ಕಾರ್ಕಳ ಶಾಸಕ ಸುನೀಲ್ ಕುಮಾರ್ ಬೆಂಗಳೂರಿನ ತಮ್ಮ ಕಚೇರಿಯಿಂದ ವೀಡಿಯೋ ಸಂವಾದದಲ್ಲಿ ಭಾಗವಹಿಸಿ ಎಲ್ಲ ಗ್ರಾ.ಪಂ.ಗಳಿಗೆ ತಮ್ಮ ಶಾಸಕರ ಅನುದಾನದಿಂದ ಕಿಟ್ ಹಾಗೂ ಪಲ್ಸ್ ಆಕ್ಸಿಮೀಟರ್‌ಗಳನ್ನು ನೀಡಲಾಗುತ್ತಿದ್ದು ಇದರ ಸಮರ್ಪಕ ಬಳಕೆ ಮಾಡಿಕೊಳ್ಳಬೇಕು ಎಂದರು.
ಜಿಲ್ಲಾಧಿಕಾರಿ ಜಿ.ಜಗದೀಶ್ ಮಾತನಾಡಿ, ಕೊರೋನಾ ನಿಯಂತ್ರಣಕ್ಕೆ ಅನೇಕ ಮಾಹಿತಿಯನ್ನು ಒದಗಿಸುವುದರ ಜತೆಗೆ, ಕೋವಿಡ್ ನಿಯಂತ್ರಣಕ್ಕೆ ಸಂಬಂದಿಸಿದಂತೆ ಮಿಯಾರು ಗ್ರಾ.ಪಂ. ನಲ್ಲಿ ಕೈಗೊಂಡಿರುವ ಕ್ರಮಗಳು ಅತ್ಯುತ್ತಮವಾಗಿದ್ದು, ಇದು ಎಲ್ಲ ಪಂಚಾಯತ್ ಗಳಿಗೆ ಮಾದರಿಯಾಗಿದೆ. ಇದನ್ನು ಎಲ್ಲ ಗ್ರಾ.ಪಂ.ಗಳು ಪಾಲಿಸಬೇಕು ಎಂದರು.
ಜಿ.ಪಂ. ಸಿಇಒ ಡಾ| ನವೀನ್ ಭಟ್ ಮಾತನಾಡಿ, ಚುಚ್ಚುಮದ್ದು ನೀಡುವ ಕೇಂದ್ರಗಳಲ್ಲಿ ಜಾಗೃತಿ ವಹಿಸಿ, ಜನಜಂಗುಳಿ ಆಗದಂತೆ ನೋಡಿಕೊಳ್ಳಬೇಕು. ಯಾವುದೇ ಸಮಸ್ಯೆ ಉಂಟಾದಲ್ಲಿ ತಮ್ಮ ಅಥವಾ ಜಿಲ್ಲಾಧಿಕಾರಿಗಳ ಗಮನಕ್ಕೆ ತರಬೇಕು ಎಂದರು.ಜಿ.ಪಂ. ಉಪ ಕಾರ್ಯದರ್ಶಿ ಕಿರಣ್ ಫಡೆ°àಕರ್, ಕಾರ್ಕಳ ಮತ್ತು ಹೆಬ್ರಿ ಗ್ರಾ.ಪಂ.ನ ಅಧ್ಯಕ್ಷರು, ಉಪಾಧ್ಯಕ್ಷರು, ಪಿ.ಡಿ.ಓಗಳು ಉಪಸ್ಥಿತರಿದ್ದರು.