Advertisement

ಕರ್ನಾಟಕದಲ್ಲಿ ಕ್ರೀಡೆಗೆ ಹೆಚ್ಚು ಪ್ರೋತ್ಸಾಹ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

07:58 PM Oct 11, 2021 | Team Udayavani |

ಬೆಂಗಳೂರು: ಬೇರೆ ರಾಜ್ಯಗಳಿಗಿಂತ ಕರ್ನಾಟಕದಲ್ಲಿ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ. ಇದರ ಸೌಲಭ್ಯಗಳನ್ನು ಕ್ರೀಡಾಪಟುಗಳು ಪಡೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದರು.

Advertisement

ಅವರು ಸೋಮವಾರ ರಾಜಭವನದಲ್ಲಿ ಆಯೋಜಿಸಿದ್ದ ಟೋಕಿಯೊ ಒಲಂಪಿಕ್ಸ್ ಹಾಗೂ ಪ್ಯಾರಾಲಿಂಪಿಕ್ಸ್ ನಲ್ಲಿ ಭಾಗವಹಿಸಿದ ಕ್ರೀಡಾಪಟುಗಳು ಮತ್ತು ತರಬೇತುದಾರರಿಗೆ ಗೌರವಧನ ವಿತರಿಸಿ ಮಾತನಾಡಿದರು.

ಒಲಂಪಿಕ್ಸ್ ಗೆ ತೆರಳಲು ಕ್ರೀಡಾ ಪಟುಗಳುಗೆ ತಲಾ 10 ಲಕ್ಷ ರೂ.ಗಳ ಪ್ರೋತ್ಸಾಹಧನ ನೀಡಲಾಗುತ್ತಿದೆ. ಒಲಂಪಿಕ್ಸ್ ಗೆ ಅಗತ್ಯವಿರುವ ತಯಾರಿಯಲ್ಲಿ ನಮ್ಮ ಸರ್ಕಾರ ನಿಮ್ಮೊಂದಿಗೆ ಇದೆ  ಎಂದು ಅವರು ಹೇಳಿದರು.

ರಾಜ್ಯದಲ್ಲಿ ಕ್ರೀಡೆಗಳಿಗೆ ಮಹತ್ವ ದೊರೆಯುತ್ತಿದೆ. ಕ್ರೀಡೆಗಳಲ್ಲಿ ಮಾಡುವ ಸಾಧನೆಯ ಹಿಂದೆ ಕಠಿಣ ಶ್ರಮವಿದೆ. ಅದನ್ನು ಗುರುತಿಸುವ ಕೆಲಸವನ್ನು ಸಮಾಜ  ಮಾಡಬೇಕು. ಪ್ರತಿ ಕ್ರೀಡಾಪಟು ಸಾಕಷ್ಟು ಪರಿಶ್ರಮ ಹಾಕಿರುತ್ತಾರೆ. ಭಾರತದ ಕ್ರೀಡಾಪಟುಗಳು ದೊಡ್ದ ಸಾಹಸಿಗಳು ಎಂದು ಸಿಎಂ ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಖೇಲೋ ಇಂಡಿಯಾ ಯೋಜನೆ ಮೂಲಕ ಕ್ರೀಡೆಗೆ ಹಿಂದೆಂದಿಗಿಂತಲೂ ಹೆಚ್ವು ಪ್ರೋತ್ಸಾಹ ನೀಡಿದ್ದಾರೆ. ಪ್ಯಾರಾ ಒಲಂಪಿಕ್ಸ್ ನ ತನಕ ಮುಟ್ಟುವುದೇ ದೊಡ್ಡ ಸಾಧನೆ ಎಂದರು.

Advertisement

ಕನ್ನಡಿಗರಾದ ಸುಹಾಸ್ ಬ್ಯಾಡ್ಮಿಂಟನ್ ನಲ್ಲಿ ಬೆಳ್ಳಿ ಗಳಿಸಿದ್ದಾರೆ. ಕಠಿಣ ಪರಿಸ್ಥಿತಿಯನ್ನು ಸ್ಫೂರ್ತಿದಾಯಕ ವಾಗಿಸಿಕೊಳ್ಳವುದನ್ನು ಅವರಿಂದ ಕಲಿಯಬೇಕು ಎಂದರು.  ಅದಿತಿ ಅಶೋಕ್ ಅವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಡುತ್ತಿರುವುದು ನಮ್ಮ ಹೆಮ್ಮೆ‌ಎಂದು ಅವರು ಹೇಳಿದರು.

ಒಲಂಪಿಕ್ಸ್ ಹಾಗೂ ಪ್ಯಾರಾಲಿಂಪಿಕ್ಸ್ ನಲ್ಲಿ ರಾಜ್ಯವನ್ನು ಪ್ರತಿನಿಧಿಸಿದ ಅದಿತಿ ಅಶೋಕ್, ಸುಹಾಸ್, ಉತ್ತಪ್ಪ, ಕೆ.ಸಿ. ಗಣಪತಿ, ಸುಬೇದಾರ್ ಕುಟ್ಟಪ್ಪ ಅವರನ್ನು ಸನ್ಮಾನಿಸಿ ನಗದು ಪುರಸ್ಕಾರ ನೀಡಲಾಯಿತು.

ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್, ಯುವಜನ ಸಬಲೀಕರಣ ಹಾಗೂ ಕ್ರೀಡಾ ಸಚಿವ ಕೆ.ಸಿ. ನಾರಾಯಣಗೌಡ ಉಪಸ್ಥಿತರಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next