Advertisement

ಪರಿಶಿಷ್ಟರ ಅಭಿವೃದ್ಧಿಗೆ ಹೆಚ್ಚು ಹಣ

01:02 PM Jun 09, 2017 | Team Udayavani |

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ದೇಶದಲ್ಲಿಯೇ ಪ್ರಥಮವಾಗಿ ಪ.ಜಾತಿ ಮತ್ತು ಪ.ಪಂಗಡದ ಜನರ ಅಭಿವೃದ್ಧಿಗೆ ಕಾಯಿದೆ ಜಾರಿಗೆ ತಂದು ಹೆಚ್ಚು ಹಣವನ್ನು ಖರ್ಚು ಮಾಡುತ್ತಿದೆ ಎಂದು ವರುಣಾ ಕ್ಷೇತ್ರದ ವಸತಿ ಜಾಗೃತಿ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು. 

Advertisement

ವರುಣಾ ಕ್ಷೇತ್ರದ ತಗಡೂರು, ಚಿನ್ನಂಬಳ್ಳಿ ಹಾಡ್ಯ, ಕಾರಾಪುರ ಕಾರ್ಯ ಗ್ರಾಮಗಳಲ್ಲಿ ಸುಮಾರು 2 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಗುದ್ದಲಿಪೂಜೆ, ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ಎಲ್ಲಾವರ್ಗದ ಬಡವರು, ಹಿಂದುಳಿದವರು, ಪ.ಜಾತಿ, ಪ.ಪಂಗಡದ ಜನರ ಅಭಿವೃದ್ಧಿಗೆ ಕಾರ್ಯ ಕ್ರಮಗಳನ್ನು ರೂಪಿಸಿ ಆರ್ಥಿಕವಾಗಿ ಸಬಲರಾಗಲು ಅನುಕೂಲಮಾಡಿಕೊಟ್ಟಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಕರ್ನಾಟಕದಲ್ಲಿ ಹಿಂದೆಂದೂ ಆಗದಂತಹ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮಾಡಿ ಯಾವುದೇ ಭ್ರಷ್ಟಾಚಾರ ಹಗರಣಗಳಿಲ್ಲದೆ ಯಶಸ್ವಿಯಾಗಿ ನಾಲ್ಕು ವರ್ಷಗಳನ್ನು ಪೂರೈಸಿದೆ ಉಳಿದ ಒಂದು ವರ್ಷದಲ್ಲಿ ವರುಣಾ ಕ್ಷೇತ್ರದಲ್ಲಿ ಆಗಬೇಕಾಗಿರುವಂತಹ ಕೆಲಸಗಳನ್ನು ಪೂರ್ಣಗೊಳಿಸುವುದಾಗಿ ತಿಳಿಸಿದರು.

ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ಎಂ.ರಾಮಯ್ಯ ಮಾತನಾಡಿ, ಸರ್ಕಾರದ ಜನಪರ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಲು ಅಧಿಕಾರಿಗಳು ಶ್ರಮಿಸಬೇಕು. ವರುಣಾ ಕ್ಷೇತ್ರದಲ್ಲಿ ಇತಿಹಾಸದಲ್ಲಿಯೇ ಆಗದಂತಹ ಅಭಿವೃದ್ಧಿ ಕೆಲಸ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ್ದಾರೆ.

ಅವರ ಪುತ್ರ ಡಾ.ಯತೀಂದ್ರ ಕಳೆದ ಏಳೆಂಟು ತಿಂಗಳಿಂದ ಪ್ರತಿ ಹಳ್ಳಿಗೂ ಪ್ರವಾಸ ಮಾಡಿ ಜನರ ಸಮಸ್ಯೆಗಳನ್ನು ಆಲಿಸಿ ಪರಿಹರಿಸಲು ಶ್ರಮಿಸುತ್ತಿದ್ದಾರೆ.  ಅವರ ಮೇಲೆ ನಿಮ್ಮ ಆಶೀರ್ವಾದವಿರಲಿ ಎಂದರು. ತಹಶೀಲ್ದಾರ್‌ ದಯಾನಂದ್‌, ತಾಪಂ ಸದಸ್ಯೆ ದೇವನೂರು ಮಹಾದೇವಮ್ಮ, ಚಿನ್ನಹಳ್ಳಿ ರಾಜು, ಸಿದ್ದರಾಮೇಗೌಡ, ಮಹೇಶ್‌ ಇತರರು ಹಾಜರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next