Advertisement

Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ

05:46 PM Nov 03, 2024 | Team Udayavani |

ಹುಬ್ಬಳ್ಳಿ: ಬಿಜೆಪಿ ತನ್ನ ಕಾಲದಲ್ಲಿ ಮಾಡಿದ ಕೋವಿಡ್ ಹಗರಣದಿಂದಲೇ ರಾಜ್ಯದಲ್ಲಿ ಸಾವಿನ ಸಂಖ್ಯೆ ಜಾಸ್ತಿ ಆಗಿದೆ. ಕೊರೋನಾ ಸಾಂಕ್ರಾಮಿಕಗಿಂತ ಬಿಜೆಪಿ ಮಾಡಿದ ಭ್ರಷ್ಟಾಚಾರದಿಂದಲೇ ತುಂಬಾ ಜನ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಸಚಿವ ಈಶ್ವರ ಖಂಡ್ರೆ ಗಂಭೀರ ಆರೋಪ ಮಾಡಿದ್ದಾರೆ.

Advertisement

ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹಣದ ಹೊಳೆ ಹರಿಸುತ್ತಿದೆ ಎಂಬ ಬಿಜೆಪಿಯವರ ಆರೋಪ ವಿಷಯವಾಗಿ ರವಿವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿ, ಬಿಜೆಪಿಯವರು ತಮ್ಮ ಕಾಲದಲ್ಲಿ ಅಭಿವೃದ್ಧಿ ಮಾಡಿಲ್ಲ. ಆದರೆ ಕೊರೋನಾ ನೆಪದಲ್ಲಿ ಬ್ರಹ್ಮಾಂಡ‌ ಭ್ರಷ್ಟಾಚಾರ ಮಾಡಿದ್ದಾರೆ. ಈ ವೇಳೆ ಕಾಳಸಂತೆಯಲ್ಲಿ ಇಂಜೆಕ್ಷನ್ ಮಾರಾಟ ಮಾಡಿದರು ಎಂದು ಕುಟುಕಿದರು.

ಶಿಗ್ಗಾವಿಯಲ್ಲಿ ಬಸವರಾಜ ಬೊಮ್ಮಾಯಿ‌ ಯಾವುದೇ ಅಭಿವೃದ್ಧಿ ಮಾಡಿಲ್ಲ.‌ ನಾವು ಅಭಿವೃದ್ಧಿ ಮೂಲಕ ಮತ ಕೇಳುತ್ತಿದ್ದೇವೆ. ಈ ಬಾರಿ ಶಿಗ್ಗಾವಿಯಲ್ಲಿ ಅಭಿವೃದ್ಧಿ v/s ಭ್ರಷ್ಟಾಚಾರದ‌ ನಡುವೆ ಉಪಚುನಾವಣೆ ನಡೆಯುತ್ತಿದೆ. ನಾವು ಗೆದ್ದೆ ಗೆಲ್ಲುತ್ತೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next