Advertisement

ಕಾಂಗ್ರೆಸ್‌ನಲ್ಲಿ ದಲಿತರಿಗೆ ಹೆಚ್ಚಿನ ಅಧಿಕಾರ : ಎಚ್‌. ಆಂಜನೇಯ

03:45 AM Apr 06, 2017 | Team Udayavani |

ಬೆಂಗಳೂರು: ಕಾಂಗ್ರೆಸ್‌ ಪಕ್ಷ ಅಧಿಕಾರದಲ್ಲಿದ್ದಾಗಲೆಲ್ಲಾ ದಲಿತ ಸಮುದಾಯಕ್ಕೆ ಹೆಚ್ಚಿನ ರಾಜಕೀಯ ಹಾಗೂ ಸಾಮಾಜಿಕ ಸ್ಥಾನಮಾನಗಳನ್ನು ನೀಡಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್‌. ಆಂಜನೇಯ ತಿಳಿಸಿದ್ದಾರೆ.

Advertisement

ಮಾಜಿ ಉಪ ಪ್ರಧಾನಿ ಜಗಜೀವನ್‌ ರಾಮ್‌ ಅವರ 110 ನೇ ಜನ್ಮ ದಿನದ ಅಂಗವಾಗಿ ವಿಧಾನಸೌಧದ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದಲಿತ ಸಮುದಾಯಕ್ಕೆ ಹೆಚ್ಚಿನ ಅವಕಾಶ ಕೊಟ್ಟಿದ್ಧೇ ಕಾಂಗ್ರೆಸ್‌ ಪಕ್ಷ ಎಂದು ಹೇಳಿದರು.

ದಲಿತರು ಅನ್ನುವ ಕಾರಣಕ್ಕೆ ಡಾ. ಜಗಜೀವನ್‌ ರಾಮ್‌ ಅವರಿಗೆ ಪ್ರಧಾನಿ ಹುದ್ದೆಯಿಂದ ವಂಚಿತರಾದರು.  ಜಗಜೀವನರಾಂ ಅವರ ಆಡಳಿತ ಮತ್ತು ಸಿದ್ಧಾಂತ ನಮ್ಮೆಲ್ಲರಿಗೂ ಮಾದರಿ ಎಂದರು.

ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ವಿಚಾರ ಸಧ್ಯಕ್ಕೆ ಚರ್ಚಿಸುವ ಅಗತ್ಯವಿಲ್ಲ. ಯಾರೇ ಮುಖ್ಯಮಂತ್ರಿಯಾದರೂ, ಶಾಸಕರ ಬೆಂಬಲ ಬೇಕು. ಯಾವ ಪಕ್ಷದಲ್ಲಿಯೂ ಸಿಗದ ಪ್ರಾಮುಖ್ಯತೆ ದಲಿತರಿಗೆ ಕಾಂಗ್ರೆಸ್‌ ಪಕ್ಷದಲ್ಲಿ ದೊರೆತಿದೆ. ಮಲ್ಲಿಕಾರ್ಜುನ ಖರ್ಗೆಯವರು ಲೋಕಸಭೆಯಲ್ಲಿ ಕಾಂಗ್ರೆಸ್‌ ಪಕ್ಷದ ಸಂಸದೀಯ ಪಕ್ಷದ ನಾಯಕರಾಗಿದ್ದಾರೆ. ರಾಜ್ಯದಲ್ಲಿಯೂ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷ ಸ್ಥಾನವನ್ನು ದಲಿತರಿಗೆ ನೀಡಲಾಗಿದೆ. ಮುಖ್ಯಮಂತ್ರಿ ಚುನಾವಣೆಗೆ ಸ್ಪರ್ಧಿಸಬೇಕೆಂದರೂ ಪಕ್ಷದ ರಾಜ್ಯಾಧ್ಯಕ್ಷರು ಬಿ ಫಾರಂ ಕೊಡಬೇಕು. ಅಂತಹ ಮಹತ್ವದ ಹುದ್ದೆಯನ್ನು ದಲಿತರಿಗೆ ನೀಡಲಾಗಿದೆ. ಹೀಗಾಗಿ ರಾಜ್ಯದಲ್ಲಿ ದಲಿತ ಸಿಎಂ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next