Advertisement

ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಹೆಚ್ಚು ವಿದ್ಯಾರ್ಥಿವೇತನ: ನಳಿನ್‌ಕುಮಾರ್‌ ‌ ಮೆಚ್ಚುಗೆ

05:48 PM Dec 24, 2020 | Mithun PG |

ಬೆಂಗಳೂರು: ಮೆಟ್ರಿಕ್  ನಂತರದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನಕ್ಕೆ 59,048 ಕೋಟಿ ರೂಪಾಯಿ ನೀಡಲು ಕೇಂದ್ರ ಸರಕಾರ ಒಪ್ಪಿಗೆ ನೀಡುವ ಮಹತ್ವದ ನಿರ್ಧಾರ ಕೈಗೊಂಡಿರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ  ಮತ್ತು ಸಂಸದ ನಳಿನ್‌ ಕುಮಾರ್ ಕಟೀಲ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Advertisement

ದೂರದೃಷ್ಟಿ ಇರುವ ರಾಷ್ಟ್ರನಾಯಕರಾದ  ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರದ ಈ ನಿರ್ಣಯದಿಂದ ಸಾಮಾಜಿಕ ಸಮಾನತೆಯ ಕನಸು ನನಸಾಗಲಿದೆ. ಮುಂದಿನ ಐದು ವರ್ಷಗಳಲ್ಲಿ ನಾಲ್ಕು ಕೋಟಿಗೂ ಅಧಿಕ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಇದರಿಂದ ಪ್ರಯೋಜನವಾಗಲಿದೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: ರೈತರ ದೆಹಲಿ ಹೋರಾಟ ಎರಡನೇ ಸ್ವಾತಂತ್ರ್ಯ ಚಳುವಳಿ: ವೈ.ಎಸ್.ವಿ.ದತ್ತ

ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದರುವ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಪ್ರತಿಭಾನ್ವಿತ ವಿದ್ಯಾರ್ಥಿಗಳ ಶೈಕ್ಷಣಿಕ ಅವಶ್ಯಕತೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟವು ಈ ಯೋಜನೆಯಡಿ 59,048 ಕೋಟಿ ರೂಪಾಯಿಗಳನ್ನು ಮುಂದಿನ 5 ಶೈಕ್ಷಣಿಕ ವರ್ಷಗಳಲ್ಲಿ ನೀಡಲಿದ್ದು, ಸಮುದಾಯದ ಭಾಗ್ಯದ ಬಾಗಿಲನ್ನು ತೆರೆದಂತಾಗಿದ್ದು, ಇದಕ್ಕಾಗಿ ಪ್ರಧಾನಿಗಳಾದ ನರೇಂದ್ರ ಮೋದಿ ಅವರನ್ನು ಅಭಿನಂದಿಸುವುದಾಗಿ ಕಟೀಲ್ ತಿಳಿಸಿದ್ದಾರೆ.

ಇದನ್ನೂ ಓದಿ: ಜನರ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ: ರಾತ್ರಿ ಕರ್ಫ್ಯೂ ವಾಪಸ್

Advertisement

ಇದರಿಂದ ಕಡು ಬಡತನದಿಂದ ಉನ್ನತ ಶಿಕ್ಷಣಕ್ಕೆ ತೆರಳಲು ಸಾಧ್ಯವಾಗದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳ ಸಮಸ್ಯೆ ಪರಿಹಾರವಾಗಲಿದೆ. ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ (ಡಿಬಿಟಿ) ಮಾಡಲು ಸಚಿವ ಸಂಪುಟ ನಿರ್ಧರಿಸಿದ್ದರಿಂದ ಅವ್ಯವಹಾರದ ಅವಕಾಶವೇ ಇರಲಾರದು  ಎಂದೂ ನಳಿನ್‌ ಕುಮಾರ್ ಕಟೀಲ್ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next