ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಇತ್ತೀಚಿನ ಕೆಲವು ದಿನಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಮ್ಮ ಕಳವಳ ವ್ಯಕ್ತಪಡಿಸಿದ್ದು, ಮುಂದಿನ 7-10 ದಿನಗಳಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬರಲಿದೆ ಎಂದಿದ್ದಾರೆ.
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, “ಕಳೆದ ಕೆಲವು ದಿನಗಳಿಂದ ಕೋವಿಡ್ ಪ್ರಕರಣಗಳು ಹೆಚ್ಚುತ್ತಿವೆ. ಅದನ್ನು ನಿಯಂತ್ರಿಸಲು ನಾವು ಎಲ್ಲಾ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಮುಂದಿನ ಏಳರಿಂದ 10 ದಿನಗಳಲ್ಲಿ ಪರಿಸ್ಥಿತಿ ಸಂಪೂರ್ಣ ನಿಯಂತ್ರಣಕ್ಕೆ ಬರುವ ನಿರೀಕ್ಷೆಯಿದೆ ಎಂದರು.
ವಾಯು ಮಾಲಿನ್ಯದಿಂದಾಗಿ ಕೋವಿಡ್ ಪ್ರಕರಣಗಳು ಹೆಚ್ಚಾಗಿರುವ ಸಾಧ್ಯತೆ ಇದ್ದು ಇದೆಲ್ಲವೂ ಮುಂದಿನ ದಿನಗಳಲ್ಲಿ ಹತೋಟಿಗೆ ಬರಲಿದೆ ಎಂದಿದ್ದಾರೆ.
ಇದನ್ನೂ ಓದಿ:ಬಿಜೆಪಿಯಿಂದ ಕಾಂಗ್ರೆಸ್ ನಾಯಕರ ಟಾರ್ಗೆಟ್ : ಹೆಬ್ಬಾಳ್ಕರ್ ಆರೋಪ
ದೆಹಲಿಯಲ್ಲಿ 24 ಗಂಟೆಗಳಲ್ಲಿ 7,053 ಹೊಸ ಕೋವಿಡ್ 19 ಪ್ರಕರಣಗಳು ದಾಖಲಾಗಿದ್ದು, ರಾಷ್ಟ್ರದ ರಾಜಧಾನಿಯಲ್ಲಿ ಸೋಂಕಿನ ಪ್ರಮಾಣ ಗುರುವಾರ 4.67 ಲಕ್ಷಕ್ಕೆ ತಲುಪಿದೆ.