Advertisement

ಪರೀಕ್ಷೆ ಬಳಿಕ ಇನ್ನಷ್ಟು ಕಠಿಣ ಕ್ರಮ

05:54 AM Jun 28, 2020 | Lakshmi GovindaRaj |

ಬೆಂಗಳೂರು: ಈಗಾಗಲೇ ಆರಂಭವಾಗಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ  ಗ ‌ಳು ಮುಗಿಯುವುದನ್ನೇ ಕಾಯುತ್ತಿದ್ದು, ಪರೀಕ್ಷೆ ಮುಗಿದ ಬಳಿಕ ಇನ್ನಷ್ಟು ಕಠಿಣ ನಿರ್ಧಾರ ತೆಗೆದು  ಕೊಳ್ಳಲಾಗುವುದು ಎಂದು ಸಚಿವರ ಆರ್‌.ಅಶೋಕ್‌  ಹೇಳಿದರು. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು “ಕಾವೇರಿ’ ನಿವಾಸದಲ್ಲಿ ಶನಿವಾರ ಸಂಜೆ ತುರ್ತು ಸಭೆ ಬಳಿಕ ಪ್ರತಿಕ್ರಿಯಿಸಿದರು.

Advertisement

ಖಾಸಗಿ ಆಸ್ಪತ್ರೆಗಳಲ್ಲೂ ಕೋವಿಡ್‌ಗೆ ಚಿಕಿತ್ಸೆ ನೀಡುವಂತೆ ಸರ್ಕಾರ ಸೂಚಿಸಿದ್ದು, ದರ ಪಟ್ಟಿಯನ್ನೂ ಸರ್ಕಾರ ಪ್ರಕಟಿಸಿದೆ. ಸರ್ಕಾರದ ಆದೇಶಗಳನ್ನು ಪಾಲಿಸ ದಿದ್ದರೆ ಕಾನೂನು ಕ್ರಮ ಜರುಗಿಸಲಾಗುವುದು. ಆ ಹಂತಕ್ಕೆ ನಾವು ಹೋಗುವುದಿಲ್ಲ. ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡಲು ಒಪ್ಪಿವೆ. ಸೋಮವಾರ ಟಾಸ್ಕ್ ಫೋರ್ಸ್‌  ಸಭೆಯಿದ್ದು, ಈ ಬಗ್ಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.

ಕಂಠೀರವ ಕ್ರೀಡಾಂಗಣದ ಆವರಣದಲ್ಲಿ ಆರಂಭಿಸಲು ಉದ್ದೇಶಿಸಿದ್ದ ಕೋವಿಡ್‌ ಕೇರ್‌ ಸೆಂಟರ್‌ ಸ್ಥಳಾಂತರ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಆರ್‌. ಅಶೋಕ್‌, ರಾಜ್ಯ  ಒಲಿಂಪಿಕ್‌ ಅಸೋಸಿಯೇಷ ನ್‌ ಅಧ್ಯಕ್ಷ ಗೋವಿಂದರಾಜು ಅವರು ಕ್ರೀಡಾಂಗಣದಲ್ಲಿ ಹಾಸಿಗೆ ವ್ಯವಸ್ಥೆ ಮಾಡಬಾರದೆಂದು ಗಲಾಟೆ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯಕ್ಕೆ ಕಂಠೀರವ ಕ್ರೀಡಾಂಗಣದಲ್ಲಿ ಚಿಕಿತ್ಸೆ  ಕೊಡುವ ಸ್ಥಿತಿ ಇಲ್ಲ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next