ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿದರಹಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 24 ವಿದ್ಯಾರ್ಥಿಗಳಿಗೆ ಕೋವಿಡ್ 19 ಸೋಂಕು ದೃಢವಾಗಿದೆ.
ರವಿವಾರ ಚಿಕ್ಕಮಗಳೂರು ಜಿಲ್ಲೆಯಲ್ಲಿ 78 ಮಂದಿಯಲ್ಲಿ ಕೋವಿಡ್ ಪಾಸಿಟಿವ್ ಪತ್ತೆಯಾಗಿತ್ತು. ಅದರಲ್ಲೂ ವಿದ್ಯಾರ್ಥಿಗಳಲ್ಲೇ ಪಾಸಿಟಿವ್ ಪ್ರಕರಣಗಳು ಹೆಚ್ಚಾಗಿ ಕಾಣಿಸಿಕೊಂಡಿದೆ.
ಮೊರಾರ್ಜಿ ದೇಸಾಯಿ ವಸತಿ ಶಾಲೆಯ 24 ವಿದ್ಯಾರ್ಥಿಗಳಿಗೆ, ಆಲ್ದೂರಿನ ಅಂಬೇಡ್ಕರ್ ವಸತಿ ಶಾಲೆಯ 19 ವಿದ್ಯಾರ್ಥಿಗಳಿಗೆ ಸೋಂಕು ದೃಢವಾಗಿದೆ. ರವಿವಾರ ಒಂದೇ ದಿನ 58 ವಿದ್ಯಾರ್ಥಿಗಳಿಗೆ ಸೋಂಕು ದೃಢವಾಗಿದೆ.
ಇದನ್ನೂ ಓದಿ:ನನ್ನ ಬಗ್ಗೆ ಮಾತಾಡುವಾಗ ಬಹಳ ಎಚ್ಚರದಿಂದಿರಿ… ಪಾಟೀಲ್ ಗೆ ಕಾರಜೋಳ ಎಚ್ಚರಿಕೆ
Related Articles
ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಪ್ರಮಾಣ ಹೆಚ್ಚಾಗುತ್ತಿರುವುದು ಪೋಷಕರಲ್ಲಿ ಆತಂಕಕ್ಕೆ ಕಾರಣವಾಗಿದೆ.