Advertisement
ಕಳೆದ 15 ದಿನಗಳಲ್ಲಿ 61,000ಕ್ಕೂ ಅಧಿಕ ಕೋವಿಡ್ ಸೋಂಕಿತರು ಚೇತರಿಸಿ ಕೊಂಡಿದ್ದಾರೆ. 3,606 ಸೋಂಕಿತರನ್ನು ಗುರುವಾರವೆ ಬಿಡುಗಡೆ ಮಾಡಲಾಗಿದೆ. ಮಹಾರಾಷ್ಟ್ರದ ಚೇತರಿಕೆ ದರವು ಶೇ. 55.39ರಷ್ಟಿದ್ದು, ಇದು ರಾಷ್ಟ್ರೀಯ ದರಕ್ಕಿಂತ ಶೇ. 63.24ರಷ್ಟಿದೆ. ವೈದ್ಯಕೀಯ ಶಿಕ್ಷಣ ಮತ್ತು ಔಷಧ ವಿಭಾಗವು ಬಿಡುಗಡೆ ಮಾಡಿದ ವರದಿಯ ಪ್ರಕಾರ ರಾಜ್ಯದ ಮರಣ ಪ್ರಮಾಣವು ಶೇ. 4ರಷ್ಟಿದ್ದು, ಇದು ರಾಷ್ಟ್ರೀಯ ಸರಾಸರಿಗಿಂತ ಶೇ. 2.6ರಷ್ಟಿದೆ. ಸಣ್ಣ ಪಟ್ಟಣಗಳು ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ನಿಯಂತ್ರಿಸಿದರೆ ಮುಂದಿನ ಕೆಲವು ವಾರಗಳಲ್ಲಿ ಪರಿಸ್ಥಿತಿ ಸುಧಾರಿಸಬಹುದು ಎಂದು ರಾಜ್ಯ ಅಧಿಕಾರಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಆಗಸ್ಟ್ ಅಂತ್ಯದ ವೇಳೆಗೆ ಕೋವಿಡ್ ಸಂಪೂರ್ಣ ಹತೋಟಿಗೆ ಬರುವ ವಿಶ್ವಾಸವಿದೆ ಎಂದು ರಾಜ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Advertisement
ರಾಜ್ಯದಲ್ಲಿ 1.50 ಲ.ಕ್ಕೂ ಅಧಿಕ ಚೇತರಿಕೆ
05:40 PM Jul 18, 2020 | Suhan S |
Advertisement
Udayavani is now on Telegram. Click here to join our channel and stay updated with the latest news.