Advertisement

ಮಳವಳ್ಳಿ : ದೇವರ ಪ್ರಸಾದ ಸೇವಿಸಿ 20ಕ್ಕೂ ಹೆಚ್ಚು ಮಂದಿ ಅಸ್ವಸ್ಥ

11:40 AM Jul 28, 2021 | Team Udayavani |

ಮಂಡ್ಯ :  ಪ್ರಸಾದ ಸೇವಿಸಿದ್ದ ಸುಮಾರು 20ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿರುವ ಘಟನೆ ಮಳವಳ್ಳಿ ತಾಲ್ಲೂಕಿನ ಕಾಗೇಪುರ ಮತ್ತು ಕೊರೇಗಾಲ ಗ್ರಾಮಗಳಲ್ಲಿ ಮಂಗಳವಾರ ನಡೆದಿದೆ.

Advertisement

ಆಷಾಡ ಸೋಮವಾರ ಆಗಿದ್ದರಿಂದ ಟಿ.ಕಾಗೇಪುರ ಗ್ರಾಮದಲ್ಲಿ ಬಸವೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಗ್ರಾಮದ ಮುಖಂಡರೊಬ್ಬರು ಪೂಜಾ ಕಾರ್ಯಕ್ರಮ ಆಯೋಜಿಸಿದ್ದರು. ಆರ್ಚಕ ಶಿವಬಸಪ್ಪ ಅವರು ಬಾಳೆಹಣ್ಣು, ಬೆಲ್ಲ, ಅವಲಕ್ಕಿ, ಸಕ್ಕರೆ, ಏಲಕ್ಕಿಯಿಂದ ತಯಾರಿಸಿದ ಪಂಚಾಮೃತ ಪ್ರಸಾದ ತಯಾರಿಸಿ ದೇವರ ದರ್ಶನಕ್ಕೆ ಬಂದಿದ್ದ ಕೊರೇಗಾಲ ಗ್ರಾಮದ 6 ಮಂದಿ ಸೇರಿದಂತೆ ಸುಮಾರು 25 ಮಂದಿಗೆ ಪ್ರಸಾದ ನೀಡಿದ್ದಾರೆ.

ಪ್ರಸಾದ ಸೇವಿಸಿದ ಕೆಲವರಿಗೆ ಸೋಮವಾರ ರಾತ್ರಿ ವಾಂತಿ, ಭೇದಿ ಕಾಣಿಸಿಕೊಂಡಿದೆ. ಮಂಗಳವಾರ ಸಂಜೆ ವೇಳೆಗೆ ಬಹುತೇಕ ಮಂದಿಗೆ ವಾಂತಿ ಭೇದಿಯಿಂದ ಅಸ್ವಸ್ಥಗೊಂಡಿದ್ದು, ಈ ಬಗ್ಗೆ ಮಾಹಿತಿ ತಿಳಿದ ಕೂಡಲೇ ತಾಲ್ಲೂಕು ವೈದ್ಯಾಧಿಕಾರಿ ಡಾ.ವೀರಭದ್ರಪ್ಪ, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ಸಂಜಯ್, ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿ ಡಾ.ಅನಿಲ್, ಸ್ಥಳೀಯ ವೈದ್ಯಾಧಿಕಾರಿ ಡಾ.ಸಚಿನ್, ಡಾ.ಶಿವಶಂಕರ್ ಅಸ್ವಸ್ಥಗೊಂಡಿರುವವರ ಮನೆಗಳಿಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ನಡೆಸಿ ಚಿಕಿತ್ಸೆ ನೀಡಿದ್ದು, ಸ್ಥಳದಲ್ಲಿಯೇ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಮೊಕ್ಕಾಂ ಹೊಡಿದ್ದಾರೆ.

ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ. ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.  ಪ್ರಸಾದ ತಯಾರಿಸಿದ ಆರ್ಚಕರ ಬಳಿ ಮಾಹಿತಿ ಪಡೆದಿದ್ದು, ಪ್ರಸಾದವನ್ನು ಪರೀಕ್ಷೆಗೆ ಒಳಪಡಿಸಲಾಗುವುದು. ಸದ್ಯದ ಪರಿಸ್ಥಿತಿಯಲ್ಲಿ ಎಲ್ಲರೂ ಆರೋಗ್ಯವಾಗಿದ್ದು, ಎರಡು ಗ್ರಾಮಗಳಲ್ಲಿ ವೈದ್ಯರು ಹಾಗೂ ಸಿಬ್ಬಂದಿಗಳು ಅಸ್ವಸ್ಥಗೊಂಡಿರುವವರ ಆರೋಗ್ಯದ ಮೇಲೆ ನಿಗಾವಹಿಸಿದ್ದಾರೆ ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ.ವೀರಭದ್ರಪ್ಪ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next