Advertisement

ಚಿಕ್ಕಮಗಳೂರು: ಕೈ ಶಾಸಕರ ಆಪ್ತ ಸೇರಿ 250 ಕ್ಕೂ ಹೆಚ್ಚಿನ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

02:49 PM Aug 06, 2022 | Team Udayavani |

ಚಿಕ್ಕಮಗಳೂರು: ವಿಧಾನಸಭಾ ಚುನಾವಣೆಗೆ ಕೆಲ ತಿಂಗಳು ಬಾಕಿ ಇರುವಾಗಲೇ ಕಾಫಿನಾಡಿನಲ್ಲಿ  ರಾಜಕೀಯ ಚಟುವಟಿಕೆ ಗರಿಗೆದರಿದೆ. ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷಾಂತರ ಪರ್ವ ಜೋರಾಗಿದೆ.

Advertisement

ಶನಿವಾರ ಬಾಳೆಹೊನ್ನೂರಿನಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಯಲ್ಲಿ ಕಾಂಗ್ರೆಸ್‌ ಪಕ್ಷದ 250 ಕ್ಕೂ ಹೆಚ್ಚಿನ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ ಡಿ ರಾಜೇಗೌಡರ ಅಪ್ತ ಹಾಗೂ  ತಾಲ್ಲೂಕ್ ಪಂಚಾಯತಿ ಮಾಜಿ ಸದಸ್ಯ ನಾಗೇಶ್ ಸೇರಿದಂತೆ 250 ಕ್ಕೂ ಹೆಚ್ಚಿನ ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿಗೆ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಹೊಸ ಸದಸ್ಯರನ್ನು ಮಾಜಿ ಸಚಿವ ಡಿ ಎನ್ ಜೀವರಾಜ್  ಪಕ್ಷದ ಧ್ವಜ ನೀಡಿ ಸ್ವಾಗತಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next