Advertisement

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

02:40 PM Nov 13, 2024 | Team Udayavani |

ಬೀದರ್: ಆಹಾರ ಸೇವನೆಯಿಂದ ಹುಮನಾಬಾದ್ ಪಟ್ಟಣದ ಹೊರವಲಯದ ಬಸವತೀರ್ಥ ವಿದ್ಯಾ ಪೀಠದ ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ವಾಂತಿ-ಭೇದಿಯಿಂದ ಬಳಲಿರುವ ಘಟನೆ ಬುಧವಾರ(ನ.13) ಬೆಳಿಗ್ಗೆ ನಡೆದಿದ್ದು, ಕೂಡಲೆ ಮಕ್ಕಳನ್ನು ಹುಮನಾಬಾದ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

ಬೆಳಗ್ಗೆ ಮಕ್ಕಳು ಉಪಹಾರಕ್ಕೆ ಚಿತ್ರಾನ್ನ ಸೇವಿಸಿದ್ದಾರೆ. ಬಳಿಕ, ವಿದ್ಯಾರ್ಥಿಗಳು ವಾಂತಿ-ಭೇದಿಯಿಂದ ನರಳಾಡುತ್ತಿದ್ದಂತೆ, ಕೂಡಲೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು, ರಾತ್ರಿ ಉಳಿದ ಅನ್ನಕ್ಕೆ ಬೆಳಗ್ಗೆ ಒಗ್ಗರಣೆ ಹಾಕಿ, ಮಕ್ಕಳಿಗೆ ತಿನ್ನಲು ನೀಡಿದ್ದಕ್ಕೆ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಆಸ್ಪತ್ರೆಗೆ ಎಂಎಲ್​ಸಿ ಭೀಮರಾವ್ ಪಾಟೀಲ್ ಭೇಟಿ ನೀಡಿ, ಆರೋಗ್ಯ ವಿಚಾರಿಸಿದರು.

ಇದನ್ನೂ ಓದಿ: Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

Advertisement

Udayavani is now on Telegram. Click here to join our channel and stay updated with the latest news.

Next