Advertisement

Congress Govt.; 9 ತಿಂಗಳಲ್ಲಿ 500ಕ್ಕೂ ಹೆಚ್ಚು ರೈತರ ಆತ್ಮಹತ್ಯೆ: ವಿಜಯೇಂದ್ರ

12:55 AM Feb 13, 2024 | Team Udayavani |

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರ ಅಸ್ತಿತ್ವಕ್ಕೆ ಬಂದಾಗಿನಿಂದ ಅಭಿವೃದ್ಧಿ ಕಾರ್ಯಗಳು ಶೂನ್ಯವಾಗಿದ್ದು, 9 ತಿಂಗಳಲ್ಲಿ 500ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು. ಅತ್ಯಂತ ಕಡಿಮೆ ಅವಧಿಯಲ್ಲಿ ದೇಶದಲ್ಲಿ ಯಾವುದಾದರೂ ಸರಕಾರ ಜನಪ್ರಿಯತೆ ಕಳೆದುಕೊಂಡಿದ್ದರೆ ಅದು ಸಿದ್ದರಾಮಯ್ಯ ಸರಕಾರ ಎಂದು ಹರಿಹಾಯ್ದರು.

Advertisement

ತಾಲೂಕಿನ ದಿಬ್ಬೂರು ಗ್ರಾಮದಲ್ಲಿ ಸೋಮವಾರ ಬಿಜೆಪಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಗ್ರಾಮ ಪರಿಕ್ರಮ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್‌ ಸರಕಾರ ಬಡವರು, ದಲಿತರು ಹಾಗೂ ಜನ ವಿರೋಧಿ ಎಂಬುದು ಸಾಬೀತಾಗಿದೆ ಎಂದರು.

ರೈತರಿಗೆ ಕನಿಷ್ಠ 7 ತಾಸು ತ್ರಿಫೇಸ್‌ ವಿದ್ಯುತ್‌ ಕೊಡಲು ರಾಜ್ಯ ಸರಕಾರಕ್ಕೆ ಆಗುತ್ತಿಲ್ಲ. ಬರ ನಿರ್ವಹಣೆಯಲ್ಲೂ ಸರಕಾರ ವಿಫ‌ಲವಾಗಿದ್ದು 9 ತಿಂಗಳಲ್ಲಿ 500 ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರಿಗೆ ಹಾಲಿನ ಪ್ರೋತ್ಸಾಹಧನ ಕೊಟ್ಟಿಲ್ಲ. ಸುಮಾರು 715 ಕೋಟಿ ರೂ. ಬಾಕಿ ಉಳಿಸಿಕೊಂಡಿದೆ ಎಂದು ಆರೋಪಿಸಿದರು.

ಮಾಜಿ ಸಚಿವ ಡಾ| ಕೆ.ಸುಧಾಕರ್‌, ಬಿಜೆಪಿ ರಾಜ್ಯ ಸಂಘಟನ ಪ್ರಧಾನ ಕಾರ್ಯದರ್ಶಿ ರಾಜೇಶ್‌, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್‌, ರಾಜ್ಯ ಕಾರ್ಯದರ್ಶಿ ಸಿ.ಮುನಿರಾಜು ಸೇರಿ ಹಲವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next