Advertisement
ಕುಶಾಲನಗರ ಸಮೀಪದ ತಾವರೆಕರೆ ಹತ್ತಿರ ಬಳಿ ರಸ್ತೆ ಮೇಲೆ ಭಾರೀ ಪ್ರಮಾಣದಲ್ಲಿ ನೀರು ನಿಂತಿದ್ದರೂ, ಶನಿವಾರ ರಾತ್ರಿ ಚಾಲಕನೊಬ್ಬ ಬಸ್‌ನ್ನು ದಾಟಿಸಲು ಮುಂದಾಗಿ ನೀರಿನಲ್ಲಿ ಸಿಲುಕಿಕೊಂಡ ಘಟನೆ ನಡೆದಿದೆ. ಬಳಿಕ ಕುಶಾಲನಗರ ಡಿವೈಎಸ್‌ಪಿ ಮುರಳೀಧರ್ ಮತ್ತು ತಂಡದವರು ಬಸ್‌ನಲ್ಲಿದ್ದ ಪ್ರಯಾಣಿಕರನ್ನು ಅಪಾಯದಿಂದ ಪಾರು ಮಾಡಿದರು.ಕಳೆದ ಮೂರು ದಿನಗಳಿಂದ ಸುರಿದ ಮಳೆಯಿಂದಾಗಿ ಕಾವೇರಿ- ಹಾರಂಗಿ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿ ಕೂಡಿಗೆ, ಕೂಡೂÉರು, ಮುಳ್ಳಸೋಗೆ ಕೂಡುಮಂಗಳೂರು, ಹೆಬ್ಟಾಲೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 350ಕ್ಕೂ ಹೆಚ್ಚು ಮನೆಗಳು ಜಲಾವೃತ ಗೂಂಡಿವೆ.
Related Articles
Advertisement
ಜಿ.ಪಂ. ಸದಸ್ಯರ ಮನೆಗೆ ಹಾನಿ ಕೊಡಗು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆ ಕೆ,ಪಿ. ಚಂದ್ರಕಲಾ ಅವರ ಮನೆ ಕಾವೇರಿ ನದಿ ನೀರಿನಿಂದ ಆವೃತವಾಗಿದೆ. ಗುಮ್ಮನಕೂಲ್ಲಿ ಗ್ರಾಮಕ್ಕೆ ಕಾವೇರಿ ನದಿ ನೀರು ನುಗ್ಗಿದ ಪರಿಣಾಮ ಚಂದ್ರಕಲಾ ಅವರ ಮನೆ ಮತ್ತು ಅವರಿಗೆ ಸೇರಿದ ತೋಟ ಮುಳುಗಡೆಗೊಂಡಿದೆ. ನೀರು ಅತಿ ವೇಗವಾಗಿ ನುಗ್ಗಿದ ಪರಿಣಾಮ ಮನೆಯ ಯಾವುದೇ ಸಾಮಗ್ರಿಗಳನ್ನು ಸಾಗಾಟ ಮಾಡಲು ಸಾದ್ಯವಾಗಲಿಲ್ಲ ಎಂದು ಚಂದ್ರಕಲಾ ತಿಳಿಸಿದ್ದಾರೆ.
ಗೊಬ್ಬರ ಗೋದಾಮಿಗೂ ಹಾನಿ: ಹಾರಂಗಿ ನದಿ ತಟದಲ್ಲಿರುವ ಕೂಡಿಗೆಯ ಕೂಡುಮಂಗಳೂರು ರಾಮೇಶ್ವರ ಸಹಕಾರ ಸಂಘದ ಗೊಬ್ಬರದ ಗೂದ್ದಮು ನೀರಿನಿಂದ ಜಲಾವೃತಗೊಂಡಿದೆ. ಈ ಬಾರಿ ಕಾವೇರಿ- ಹಾರಂಗಿ ಸಂಗಮ ಸ್ಥಳದಲ್ಲಿ ನೀರು ಅಧಿಕಗೊಂಡು ಕೂಡಿಗೆ ಸೇತುವೆ ಕಡೆಗೆ ತಳ್ಳಲ್ಪಟ್ಟ ಹಿನ್ನೆಲೆಯಲ್ಲಿ ಗೊಬ್ಬರ ಸಂಗ್ರಹ ಮಾಡಿದ ಗೋದಾಮಿಗೆ ಒಂದೇ ಸಮನೆ ನೀರು ನುಗ್ಗಿ ಗೋದಾಮಿನಲ್ಲಿದ್ದ ಗೊಬ್ಬರದ ಮೂಟೆಗಳು ನೀರಿನಲ್ಲಿ ಮುಳುಗಿದ್ದು, ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಸೇತುವೆಗೆ ಹಾನಿ
ಕಣಿವೆಯ ರಾಮಲಿಂಗೇಶ್ವರ ದೇವಾಲಯದ ಬಳಿ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ತೂಗು ಸೇತುವೆ ಕಾವೇರಿ ನದಿ ನೀರಿನ ರಭಸಕ್ಕೆ ಕೊಚ್ಚಿ ಹೋಗಿದೆ ಕಾವೇರಿ- ಹಾರಂಗಿ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿ ತೂಗು ಸೇತುವೆಯ ಮೇಲೆ ಹರಿಯುತ್ತಿತ್ತು. ಶನಿವಾರ ಅಪರಾಹ್ನ ನೀರು ಹೆಚ್ಚಾದ ಪರಿಣಾಮವಾಗಿ ತೂಗು ಸೇತುವೆಯ ಮೆಟ್ಟಿಲುಗಳು ನೀರಿನಲ್ಲಿ ಕೊಚ್ಚಿಹೋಗಿದೆ.