ಮೈಸೂರು: ಪದವಿ ಪೂವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ಮಧ್ಯ ವಾರ್ಷಿಕ ಪರೀಕ್ಷೆ ನಡೆಸಲು ಮುಂದಾಗಿರುವ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ ಆರ್ಗನೈಜೇಷನ್ (ಎಐಡಿಎಸ್‌ಒ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ನಗರದ ರಾಮಸ್ವಾಮಿ ವೃತ್ತದ ಬಳಿ ಮಂಗಳವಾರ ವಿವಿಧ ಕಾಲೇಜಿನ 600ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿ ಪ್ರತಿವರ್ಷದಂತೆ ಅಂತಿಮ ಪರೀಕ್ಷೆಯನ್ನು ಮಾತ್ರ ನಡೆಸಬೇಕೆಂದು ಆಗ್ರಹಿಸಿದರು. ಸುತ್ತೋಲೆಯ ಪ್ರಕಾರ, ಈಗ ನಡೆಯುವ ಮಧ್ಯವಾರ್ಷಿಕ ಪರೀಕ್ಷೆ ರಾಜ್ಯ ಬೋರ್ಡ್ ಪರೀಕ್ಷೆಯಾಗಿ ನಡೆಯಲಿದ್ದು, ನವೆಂಬರ್ 29ರಿಂದ ಪರೀಕ್ಷೆಗಳು ಆರಂಭವಾಗಲಿವೆ.
ಇನ್ನೂ 15 ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಯಾವು ದೇ ಪೂರ್ವ ಸೂಚನೆ ಇಲ್ಲದೇ, ಪೂರ್ವ ತಯಾರಿ ಇಲ್ಲದೆ ಏಕಾಏಕಿ ಬೋರ್ಡ್ ಪರೀಕ್ಷೆಯೊಂದನ್ನು ಎದುರಿಸಲು ಸಾಧ್ಯವೇ ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಪ್ರಶ್ನಿಸಿದರು. ಕೋವಿಡ್‌ನಿಂದ ವಿದ್ಯಾರ್ಥಿಗಳು ಪ್ರಥಮ ಪಿಯು ಪರೀಕ್ಷೆ ಬರೆಯದೆಯೇ ಬಡ್ತಿ ಪಡೆದಿದ್ದಾರೆ. ಎರಡು ವರ್ಷಗಳು ಯಾವುದೇ ಶೈಕ್ಷಣಿಕ ಚಟುವಟಿಕೆ ನಡೆಯದ ಕಾರಣ ವಿದ್ಯಾರ್ಥಿಗಳು ಕಲಿಕಾ ಪದ್ಧತಿ ಹಾಗೂ ವಿಧಾನ ಸ್ವಲ್ಪಮಟ್ಟಿಗೆ ನಿಧನವಾಗಿದೆ. ಹೀಗಾಗಿ ಪರೀಕ್ಷೆ ಸಿದ್ಧರಾಗಲು ಹೆಚ್ಚಿನ ಸಮಯ ಬೇಕಿದೆ.
ಇದನ್ನೂ ಓದಿ:- ಜನ್ಮದಿನದಂದೇ ನೇತ್ರದಾನಕ್ಕೆ ಶಾಸಕರ ನೋಂದಣಿ
ಕಾಲೇಜು ಪುನಾರಂಭ ಕೂಡ 3 ತಿಂಗಳು ವಿಳಂಬವಾಗಿದೆ. ಇದರಿಂದ ಪಠ್ಯಕ್ರಮ ಪೂರ್ಣಗೊಂಡಿಲ್ಲ. ಇಂಥ ಸಮಯದಲ್ಲಿ ರಾಜ್ಯ ಸರ್ಕಾರ ಮಧ್ಯವಾರ್ಷಿಕ ಪರೀಕ್ಷೆಯನ್ನು ಬೋರ್ಡ್ ಪರೀಕ್ಷೆ ಮಾದರಿ ನಡೆಸುತ್ತದೆ ಎಂಬ ಹಠಾತ್ ನಿರ್ಧಾರ ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಪೋಷಕರಲ್ಲಿ ಆತಂಕ ಸೃಷ್ಟಿಸಿದೆ ಎಂದರು. ಪ್ರತಿಭಟನೆಯಲ್ಲಿ ಎಐಡಿಎಸ್‌ಒ ಜಿಲ್ಲಾ ಧ್ಯಕ್ಷ ಸುಭಾಷ್, ಉಪಾಧ್ಯಕ್ಷ ಅಷಿ ಯಾ ಬೇಗಂ, ಕಾರ್ಯದರ್ಶಿ ಚಂದ್ರಕಲಾ, ವಿದ್ಯಾ ರ್ಥಿಗಳು ಮಯೂರ್, ಪ್ರಶಾಂತ, ಪಾರ್ಥಿ ವ್, ಸ್ವಾತಿ, ಕಾವ್ಯ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಕಾಲೇಜು ಮಟ್ಟದಲ್ಲಿ ಮಧ್ಯ ವಾರ್ಷಿಕ ಪರೀಕ್ಷೆ ನಡೆಸಿ
ಸರ್ಕಾರ ಮಧ್ಯ ವಾರ್ಷಿಕ ಪರೀಕ್ಷೆಯನ್ನು ಬೋರ್ಡ್ ಪರೀಕ್ಷೆಯಾಗಿ ನಡೆಸುವುದನ್ನು ಬಿಟ್ಟು, ಕಾಲೇಜು ಮಟ್ಟದಲ್ಲಿ ನಡೆಸಬೇಕು. ಅಂತಿಮ ಪರೀಕ್ಷೆಯನ್ನು ಮಾತ್ರ ನಡೆಸಬೇಕು. ಶೈಕ್ಷಣಿಕ ವೇಳಾಪಟ್ಟಿ ವಿಸ್ತರಿಸಿ, ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಗಳನ್ನು ಜೂನ್ ತಿಂಗಳಿಗೆ ನಿಗದಿಪಡಿಸಬೇಕು ಹಾಗೂ ಯಾವುದೇ ಸುತ್ತೋಲೆಗಳನ್ನು ಶೈಕ್ಷಣಿಕ ವರ್ಷದಲ್ಲಿ ಹೊರಡಿಸಬೇಕೆಂದು ವಿದ್ಯಾರ್ಥಿಗಳು ಆಗ್ರಹಿಸಿದರು.