ಯಾದಗಿರಿ: ಜಿಲ್ಲೆಯಲ್ಲಿ ಶನಿವಾರವೂ ಕೋವಿಡ್-19 ಸೋಂಕಿತರ ಸಂಖ್ಯೆಯಲ್ಲಿ ವಿಪರೀತ ಹೆಚ್ಚಳವಾಗಿದ್ದು, ಶನಿವಾರ ಒಂದೇ ದಿನ ಸೋಂಕಿತರ ಸಂಖ್ಯೆ ಶತಕ ದಾಟಿದೆ.
ಶನಿವಾರ ಜಿಲ್ಲೆಯಲ್ಲಿ ಬರೋಬ್ಬರಿ 103 ಜನರಲ್ಲಿ ಕೋವಿಡ್-19 ಸೋಂಕು ದೃಡವಾಗಿದ್ದು 20ಕ್ಕೂ ಹೆಚ್ಚು ಅಪ್ರಾಪ್ತ ಮಕ್ಕಳಲ್ಲಿ ಸೋಂಕು ವಕ್ಕರಿಸಿದೆ.
ಜಿಲ್ಲೆಯಲ್ಲಿ ಈವರೆಗೆ 373 ಇದ್ದ ಸೋಂಕಿತರ ಸಂಖ್ಯೆ ಇಂದಿನ ವರದಿಯ ನಂತರ 476ಗೆ ಏರಿಕೆಯಾಗಿದೆ.
ಕಳೆದೆರಡು ದಿನದಿಂದ ಕೋವಿಡ್-19 ರಣಕೇಕೆ ಹಾಕುತ್ತಿದ್ದು, ನಿನ್ನೆಯಷ್ಟೇ 74 ಜನರಲ್ಲಿ ಕಾಣಿಸಿಕೊಂಡಿದ್ದ ಸೋಂಕು ಇಂದು 103 ಜನರಲ್ಲಿ ಕಾಣಿಸಿಕೊಂಡಿದೆ.
ರಾಜ್ಯದಲ್ಲಿಂದು ಹೊಸ 378 ಸೋಂಕು ಪ್ರಕರಣಗಳು ದೃಢವಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 5213 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಒಟ್ಟು 280 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಒಟ್ಟು 1968 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಸದ್ಯ 3184 ಸಕ್ರೀಯ ಪ್ರಕರಣಗಳಿದ್ದು, 59 ಜನರು ಸೋಂಕಿನ ಕಾರಣದಿಂದ ಮರಣ ಹೊಂದಿದ್ದಾರೆ. ಇಬ್ಬರು ಸೋಂಕಿತರು ಕೋವಿಡ್ ಅಲ್ಲದ ಅನ್ಯ ಕಾರಣದಿಂದ ಸಾವನ್ನಪ್ಪಿದ್ದಾರೆ.