ಬೆಂಗಳೂರು: ರಾಜ್ಯದಲ್ಲಿ ಅಪಾಯಕಾರಿ ಕೋವಿಡ್-19 ಸೋಂಕು ಪ್ರಕರಣಗಳು ಮತ್ತೆ ವರದಿಯಾಗುತ್ತಿದ್ದು, ಈಗ ಸೋಂಕಿತರ ಸಂಖ್ಯೆ ಶತಕ ದಾಟಿದೆ.
ಬುಧವಾರ ಬೆಳಗ್ಗೆಯವರೆಗೆ ನಾಲ್ಕು ಹೊಸ ಪ್ರಕರಣಗಳು ಪತ್ತೆಯಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.
102 ಪ್ರಕರಣದ ಸೋಂಕಿತ 24 ವರ್ಷದ ಬೆಂಗಳೂರು ನಿವಾಸಿಯಾಗಿದ್ದು, ಬೆಂಗಳೂರಿನ ನಿಯೋಜಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ
ನಂಜನಗೂಡಿನ ಮತ್ತಿಬ್ಬರಿಗೆ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. 52ನೇ ಪ್ರಕರಣದ ಸೋಂಕಿತನೊಂದಿಗೆ ಕೆಲಸ ಮಾಡುತ್ತಿದ್ದ ಇಬ್ಬರಿಗೆ ಸೋಂಕು ಪತ್ತೆಯಾಗಿದೆ.
105ನೇ ಪ್ರಕರಣದ ಸೋಂಕಿತ 33 ವರ್ಷದ ಬೆಂಗಳೂರು ನಿವಾಸಿಗೆ ಮೈಸೂರಿನಲ್ಲಿ ಸೋಂಕು ಪತ್ತೆಯಾಗಿದ್ದು, ನಿಯೋಜಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.