ಬೆಂಗಳೂರು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನಡುವೆ, ದೇಶದೆಲ್ಲೆಡೆ ಎಲೆಕ್ಟ್ರಾನಿಕ್ ವಾಹನಗಳು ದಿನದಿಂದ ದಿನಕ್ಕೆ ಪ್ರಾಮುಖ್ಯತೆ ಪಡೆದುಕೊಳ್ಳುತ್ತಲೇ ಇವೆ. ಕರ್ನಾಟಕವು ಎಲೆಕ್ಟ್ರಾನಿಕ್ ವಾಹನಗಳ ಮಾರಾಟದಲ್ಲಿ ಮುಂಚೂಣಿಯಲ್ಲಿದೆ ಎಂದು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.
ಬಳಕೆ ಖರ್ಚು ಕಡಿಮೆ ಮಾಡುವ ಜೊತೆಗೆ ಎಲೆಕ್ಟ್ರಾನಿಕ್ ವಾಹನಗಳು ಪರಿಸರ ಸ್ನೇಹಿ, ವಾಯುಮಾಲಿನ್ಯ ನಿಯಂತ್ರಣದಲ್ಲೂ ಪರಿಣಾಮಕಾರಿಯಾಗಲಿದೆ. ಹೀಗಾಗಿ ಸರ್ಕಾರವು ಎಲೆಕ್ಟ್ರಾನಿಕ್ ವಾಹನಗಳ ಬಳಕೆಗೆ ಸಾಕಷ್ಟು ಉತ್ತೇಜನ ನೀಡುತ್ತಿದ್ದು, ಜನರು ಸಹ ಇದರ ಕಡೆಗೆ ಒಲವು ಹೆಚ್ಚಿಸಿಕೊಂಡಿದ್ದಾರೆ ಎಂದಿದ್ದಾರೆ.
ವಾಹನ ತಯಾರಿಕಾ ಕಂಪೆನಿಗಳೂ ಇವಿ ತಯಾರಿಕೆಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿವೆ. ಪ್ರೀ ಬುಕ್ಕಿಂಗ್ ಇರುವವರಿಗೆ ವಾಹನ ಒದಗಿಸಲು ಹೆಣಗಾಡುವಂತಹ ರೀತಿಯಲ್ಲಿ ಬೇಡಿಕೆ ಹೆಚ್ಚಾಗುತ್ತಿದೆ. ದೇಶದ ಎಲ್ಲ ಭಾಗಗಳಲ್ಲಿಯೂ ಇವಿ ಬಳಕೆ ಹೆಚ್ಚುತ್ತಿದೆ. ಕರ್ನಾಟಕವು ಇದಕ್ಕೆ ಹೊರತಾಗಿಲ್ಲ. ಈಗಾಗಲೇ ಒಂದು ಲಕ್ಷಕ್ಕೂ ಹೆಚ್ಚು ಇವಿ ವಾಹನಗಳು ನೋಂದಣಿಯಾಗಿವೆ ಎಂದು ಸಚಿವ ಮುರುಗೇಶ್ ನಿರಾಣಿ ತಮ್ಮ ‘ಕೂ’ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಇದನ್ನೂ ಓದಿ:ಬರ್ತ್ ಡೇ ಜತೆ ಶಕ್ತಿ ಪ್ರದರ್ಶನ: ರಾಹುಲ್ ಗಾಂಧಿ ಜೊತೆ ಸಿದ್ದರಾಮಯ್ಯ ಪ್ರತ್ಯೇಕ ಚರ್ಚೆ?
Related Articles
‘ಇವಿಗಳು ಭವಿಷ್ಯದಲ್ಲಿ ಕರ್ನಾಟಕದ ಪ್ರಮುಖ ಭಾಗವಾಗಿ ಮುಂದುವರೆಯಲಿದೆ. ಕರ್ನಾಟಕದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಎಲೆಕ್ಟ್ರಾನಿಕ್ ವಾಹನಗಳ ನೋಂದಣಿಯಾಗಿವೆ. ಕೈಗಾರಿಕಾ ಸ್ನೇಹಿ ವಾತಾವರಣ ಹಾಗೂ ಉದ್ಯಮ ಸ್ನೇಹಿ ನೀತಿಗಳು ಕರ್ನಾಟಕವು ಭಾರತದಲ್ಲಿ ಇವಿ ಹಬ್ ಆಗಿ ಬೆಳೆಯಲು ಪ್ರಮುಖ ಕಾರಣವಾಗಿದೆ’ ಎಂದು ಹೇಳಿದ್ದಾರೆ.
Advertisement– Dr. Murugesh R Nirani (@murugesh_nirani) 28 June 2022