Advertisement

ಮೋರ್ಟರ್ ಸ್ಫೋಟ: ಬಿಎಸ್‌ಎಫ್ ಯೋಧ ಹುತಾತ್ಮ, ನಾಲ್ವರಿಗೆ ಗಾಯ

02:51 PM Dec 19, 2021 | Team Udayavani |

ಜೈಸಲ್ಮೇರ್: ರಾಜಸ್ಥಾನದ ಜೈಸಲ್ಮೇರ್ ಜಿಲ್ಲೆಯ ಕಿಶನ್‌ಗಢ ಫೈರಿಂಗ್ ರೇಂಜ್‌ನಲ್ಲಿ ಭಾನುವಾರ ನಡೆದ ಮೋರ್ಟರ್ ಸ್ಫೋಟದಲ್ಲಿ ಬಿಎಸ್‌ಎಫ್ ಯೋಧ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

136 ನೇ ಬೆಟಾಲಿಯನ್‌ನ ಬಿಎಸ್‌ಎಫ್ ಯೋಧರು ತರಬೇತಿಯಲ್ಲಿ ಭಾಗವಹಿಸಲು ಬಂದಿದ್ದಾಗ ಈ ಘಟನೆ ನಡೆದಿದೆ. ಮೃತ ಯೋಧನನ್ನು ಸಂದೀಪ್ ಸಿಂಗ್ ಎಂದು ಗುರುತಿಸಲಾಗಿದ್ದು, ಗಾಯಾಳುಗಳನ್ನು ರಾಮಗಢದ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಿರಿಯ ಬಿಎಸ್‌ಎಫ್ ಹಾಗೂ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next