Advertisement

ಗ್ರಾ.ಪಂ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಹೆಚ್ಚು ಸ್ಥಾನ; ಸಚಿವ ಸೋಮಶೇಖರ್

07:06 PM Dec 06, 2020 | Mithun PG |

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ಆಗಿರುವ ಶ್ರೀ ಅರುಣ್ ಸಿಂಗ್ ಅವರನ್ನು ಬಿಜೆಪಿ ಪ್ರಧಾನ ಕಚೇರಿಯಲ್ಲಿ ಸಹಕಾರ ಹಾಗೂ ಮೈಸೂರು ಉಸ್ತುವಾರಿ ಸಚಿವರಾದ ಶ್ರೀ ಎಸ್. ಟಿ. ಸೋಮಶೇಖರ್ ಅವರು ಭೇಟಿ ಮಾಡಿ ಅಭಿನಂದಿಸಿದರು. ಇದೇ ವೇಳೆ ಭಾರತದ ಸಂವಿಧಾನ ಕೃತಿಯನ್ನು ನೀಡಿ ಗೌರವಿಸಿದರು. ಜೊತೆಗೆ ಗ್ರಾಮ ಸ್ವರಾಜ್ಯ ಸಮಾವೇಶದ ಬಗ್ಗೆ ಮಾಹಿತಿ ನೀಡಿ, ಕಾವೇರಿ ಕೊಳ್ಳದ ಪ್ರಾಂತ್ಯ ಹಾಗೂ ಹಳೇ ಮೈಸೂರು ಭಾಗದಲ್ಲಿ ಪ್ರಸಕ್ತ ಸಾಲಿನ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸ್ಥಾನವನ್ನು ಗೆಲ್ಲಲಿದ್ದಾರೆ ಎಂದು ತಿಳಿಸಿದರು.

Advertisement

ಕಂದಾಯ ಸಚಿವರಾದ ಆರ್. ಅಶೋಕ್ ಅವರ ನೇತೃತ್ವದಲ್ಲಿ ಗ್ರಾಮ ಸ್ವರಾಜ್ಯ ಕಾರ್ಯಕ್ರಮವನ್ನು ಮೈಸೂರು ವಿಭಾಗದಲ್ಲಿ ನಡೆಸಲಾಗಿದ್ದು, ತಮ್ಮನ್ನು ಸಹಿತ ಪೌರಾಡಳಿತ ಸಚಿವರಾದ ನಾರಾಯಣ್ ಗೌಡ ರವರು, ಆಹಾರ ಸಚಿವರಾದ ಗೋಪಾಲಯ್ಯ ಅವರು, ಬಿಜೆಪಿ ಉಪಾಧ್ಯಕ್ಷರಾದ ವಿಜಯೇಂದ್ರ ಅವರು, ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ರವಿಕುಮಾರ್ ಅವರು ಹಾಗೂ ಬಿಜೆಪಿ ಎಸ್ಸಿ ಮೋರ್ಚಾದ ಅಧ್ಯಕ್ಷರಾದ ಛಲವಾದಿ ನಾರಾಯಣಸ್ವಾಮಿ ಅವರ ತಂಡದೊಂದಿಗೆ ಪ್ರತಿ ಜಿಲ್ಲೆಗೆ ಭೇಟಿ ನೀಡಿ ಗ್ರಾಮ ಸ್ವರಾಜ್ಯ ಕಾರ್ಯಕ್ರಮವನ್ನು ನಡೆಸಿಕೊಟ್ಟಿದ್ದೇವೆ ಎಂದು ಮಾಹಿತಿ ನೀಡಿದರು.

ಗ್ರಾಮ ಸ್ವರಾಜ್ಯ ಕಾರ್ಯಕ್ರಮದಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಈ ಬಾರಿ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಹೆಚ್ಚಿನ ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ. ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆರಿಸಿ ಬರಲಿದ್ದಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ ಸಚಿವರು, ಕಾರ್ಯಕ್ರಮದ ಬಗ್ಗೆ ಅರುಣ್ ಸಿಂಗ್ ಅವರಿಗೆ ಹಲವು ಮಾಹಿತಿಗಳನ್ನು ನೀಡಿದರು.

ಇದನ್ನೂ ಓದಿ: ಮರಾಠಿ ಚಿತ್ರರಂಗದ ಹಿರಿಯ ನಟ ರವಿ ಪಟವರ್ಧನ್ ನಿಧನ ; ಮಹಾರಾಷ್ಟ್ರ ಮುಖ್ಯಮಂತ್ರಿ ಸಂತಾಪ

ಮೈಸೂರು ವಿಭಾಗದಲ್ಲಿ 28-11-2020ರಿಂದ 02-12-2020ರವರೆಗೆ ಒಟ್ಟು 5 ಜಿಲ್ಲೆಗಳಲ್ಲಿ ಗ್ರಾಮ ಸ್ವರಾಜ್ಯ ಕಾರ್ಯಕ್ರಮಕ್ಕಾಗಿ ಪ್ರವಾಸ ಮಾಡಿದ್ದೇವೆ. ಒಟ್ಟು 9 ಸಮಾವೇಶಗಳನ್ನು ನಡೆಸಿದ್ದು, 40 ಮಂಡಲಗಳು ಭಾಗಿಯಾಗಿವೆ. ಈ ಕಾರ್ಯಕ್ರಮಗಳಲ್ಲಿ 3946 ಶಕ್ತಿ ಮತ್ತು ಮಹಾ ಶಕ್ತಿ ಕೇಂದ್ರದ ಪ್ರಮುಖರು ಭಾಗವಹಿಸಿದ್ದರು. ಒಟ್ಟಾರೆಯಾಗಿ 1210 ಕಿಲೋಮೀಟರ್ ದೂರವನ್ನು ಕ್ರಮಿಸಿದಂತಾಗಿದೆ ಎಂದು ಸಚಿವರಾದ ಸೋಮಶೇಖರ್ ಅವರು ಮಾಹಿತಿ ನೀಡಿದರು.

Advertisement

ಕರ್ನಾಟಕ ಸಹ ಉಸ್ತುವಾರಿಯಾದ ಡಿ.ಕೆ. ಅರುಣಾ, ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಸಿದ್ದರಾಜು ಹಾಗೂ ರವಿಕುಮಾರ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: ರೈತರ ಬೇಡಿಕೆ ಈಡೇರಿಸದಿದ್ದರೇ ಖೇಲ್ ರತ್ನ ಪ್ರಶಸ್ತಿ ಹಿಂದಿರುಗಿಸುತ್ತೇನೆ: ವಿಜೇಂದರ್ ಸಿಂಗ್

Advertisement

Udayavani is now on Telegram. Click here to join our channel and stay updated with the latest news.

Next