Advertisement
13 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಸದ್ಯ 994 ಮಂದಿಯಲ್ಲಿ ಸಕ್ರಿಯ ಪ್ರಕರಣ ಇದೆ. ಹಲವು ದಿನಗಳ ಬಳಿಕ ದ.ಕ. ಜಿಲ್ಲೆಯಲ್ಲಿ 2.91 ಪಾಸಿಟಿವಿಟಿ ದರ ದಾಖಲಾಗಿದೆ.
ಜಿಲ್ಲೆಯ ಎರಡು ಕಡೆ ಕ್ಲಸ್ಟರ್ ವಲಯವನ್ನಾಗಿ ಗುರುತಿಸಲಾಗಿದೆ. ಮಂಗಳೂರಿನ ಮನೆಯೊಂದರಲ್ಲಿ 5 ಮಂದಿಗೆ ಕೊರೊನಾ ದೃಢಪಟ್ಟಿದ್ದು, ಆ ಮನೆಯ 5 ಮಂದಿಯನ್ನು ತಪಾಸಣೆಗೆ ಒಳಪಡಿಸಲಾಗಿದೆ. ಅದೇ ರೀತಿ, ಮಂಗಳೂರಿನ ಖಾಸಗಿ ಮೆಡಿಕಲ್ ಹಾಸ್ಟೆಲ್‌ವೊಂದರ 6 ಮಂದಿಗೆ ಕೊರೊನಾ ದೃಢಪಟ್ಟಿದ್ದು, 16 ಮಂದಿಯನ್ನು ತಪಾಸಣೆಗೆ ಒಳಪಡಿಸಲಾಗಿದೆ. ಇವರು ಕೊರೊನಾ ಪಾಸಿಟಿವ್ ದೃಢಪಟ್ಟವರ ಪ್ರಾಥಮಿಕ ಸಂಪರ್ಕ ಹೊಂದಿದ್ದರು. ಉಡುಪಿ: 186 ಮಂದಿಗೆ ಪಾಸಿಟಿವ್
ಉಡುಪಿ: ಜಿಲ್ಲೆಯಲ್ಲಿ ಶನಿವಾರ 186 ಮಂದಿಗೆ ಸೋಂಕು ದೃಢಪಟ್ಟಿದೆ. 6,717 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. 36 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 708 ಪ್ರಕರಣಗಳು ಸಕ್ರಿಯವಾಗಿವೆ. 177 ಮಂದಿ ಹೋಂ ಐಸೊಲೇಶನ್ ಹಾಗೂ 9 ಮಂದಿ ಕೋವಿಡ್ ಕೇರ್ ಸೆಂಟರ್ ಮತ್ತು ಇತರ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Related Articles
Advertisement
ಕಾಸರಗೋಡು: 150 ಮಂದಿಗೆ ಸೋಂಕುಕಾಸರಗೋಡು: ಜಿಲ್ಲೆಯಲ್ಲಿ ಶನಿವಾರ 150 ಮಂದಿಗೆ ಸೋಂಕು ದೃಢಪಟ್ಟಿದ್ದು 41 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 615 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೇರಳ 5,944 ಮಂದಿಗೆ ಸೋಂಕು
ರಾಜ್ಯದಲ್ಲಿ ಶನಿವಾರ 5,944 ಮಂದಿಗೆ ಸೋಂಕು ದೃಢಪಟ್ಟಿದ್ದು 2,463 ಮಂದಿ ಗುಣಮುಖರಾಗಿದ್ದಾರೆ. 33 ಮಂದಿ ಮೃತಪಟ್ಟಿದ್ದು ಒಟ್ಟು ಸಂಖ್ಯೆ 49,547ಕ್ಕೇರಿದೆ. 31,098 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊಡಗು: 29 ಮಂದಿಗೆ ಸೋಂಕು
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಶನಿವಾರ 29 ಮಂದಿಗೆ ಸೋಂಕು ದೃಢಪಟ್ಟಿದ್ದು ಇಬ್ಬರು ಗುಣಮುಖರಾಗಿದ್ದಾರೆ. 257 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಪಾಸಿಟಿವಿಟಿ ಪ್ರಮಾಣ ಶೇ. 1.18 ರಷ್ಟಿದೆ ಎಂದು ಜಿಲ್ಲಾಧಿಕಾರಿ ಡಾ| ಬಿ.ಸಿ.
ಸತೀಶ ತಿಳಿಸಿದ್ದಾರೆ.