ಮಹದೇವಪುರ: ಪಾದಚಾರಿ ಮಾರ್ಗದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ತಾಯಿ-ಮಗಳು ಸಾವನ್ನಪ್ಪಿರುವ ಘಟನೆ ವೈಟ್ ಫೀಲ್ಡ್ ನ ಕಾಡುಗುಡಿ ಠಾಣೆ ವ್ಯಾಪ್ತಿಯ ಹೋಪ್ ಪಾರಂ ಸಿಗ್ನಲ್ ಬಳಿ ನ.19ರ ಶನಿವಾರ ನಡೆದಿದೆ.
ಸೌಂದರ್ಯ ಹಾಗೂ ಮಗಳು ಸುವಿಶಾಲಯ ಮೃತ ತಾಯಿ-ಮಗಳು.
ಅವರಿಬ್ಬರು ಇಂದು ಮುಂಜಾನೆ 6 ಗಂಟೆ ಸುಮಾರಿಗೆ ಮನೆಗೆ ತೆರಳುವ ಪಾದಚಾರಿ ಮಾರ್ಗದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ವೈರ್ ತುಳಿದು ಸ್ಥಳದಲ್ಲೇ ಇಬ್ಬರೂ ಸಾವನ್ನಪ್ಪಿದ್ದಾರೆ.
ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷವೇ ದುರಂತಕ್ಕೆ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಸಂಬಂಧಫಟ್ಟ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಪಡಿಸಿದ್ದಾರೆ.
ಘಟನೆ ಸಂಬಂಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.