Advertisement

Delhi ತಾಯಿ-ಮಗಳ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ

07:59 PM Nov 12, 2023 | Vishnudas Patil |

ಹೊಸದಿಲ್ಲಿ: ದೆಹಲಿಯ ಹೊರವಲಯದಲ್ಲಿರುವ ಖೇಡಾ ಗ್ರಾಮದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ತಾಯಿ ಮತ್ತು ಮಗಳು ತೀವ್ರವಾಗಿ ಗಾಯಗೊಂಡಿದ್ದಾರೆ.

Advertisement

ಸ್ಥಳೀಯ ಪೂಜಾ ಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸಲು ಬಂದಿದ್ದ ಇಬ್ಬರ ಮೇಲೆ ಅಪರಿಚಿತ ದುಷ್ಕರ್ಮಿಗಳು ಹಲವು ಬಾರಿ ಗುಂಡು ಹಾರಿಸಿದ್ದಾರೆ.

ತತ್ ಕ್ಷಣ ಅವರನ್ನು ಸಫ್ದರ್‌ಜಂಗ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಸದ್ಯ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ಪೊಲೀಸರ ಆರಂಭಿಕ ವರದಿಗಳ ಪ್ರಕಾರ, ದಾಳಿಯ ಹಿಂದಿನ ಉದ್ದೇಶವು ಆಸ್ತಿ ವಿವಾದಕ್ಕೆ ಸಂಬಂಧಿಸಿದ್ದು ಎನ್ನಲಾಗಿದ್ದು ತನಿಖೆ ಮುಂದುವರೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next