Advertisement
ನಗರದ ಹಳೆಶಹಾಬಾದನ ವೀರಭದ್ರೇಶ್ವರ ಮಂದಿರದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಹಾಗೂ ರಾಷ್ಟ್ರೀಯ ಬಸವ ದಳದ ವತಿಯಿಂದ ಗುರುವಾರ ಆಯೋಜಿಸಲಾಗಿದ್ದ ಮಾತೆ ಮಹಾದೇವಿ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜಾಗತಿಕ ಲಿಂಗಾಯತ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಗಿರಿಮಲ್ಲಪ್ಪ ವಳಸಂಗ ಮಾತನಾಡಿ, ಸಮಾಜದ ಹಿತ ಹಾಗೂ ಬೆಳವಣಿಗೆ ದೃಷ್ಟಿಯಿಂದ ಲಿಂಗಾಯತ ಸ್ವತಂತ್ರ ಧರ್ಮವಾಗಬೇಕು ಎಂಬುದು ಅವರ ಆಸೆಯಾಗಿತ್ತು. ಅಲ್ಲದೇ ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಮಾತೆ ಮಹಾದೇವಿ ಅವರು ಪ್ರತ್ಯೇಕ ಲಿಂಗಾಯತ ಧರ್ಮ ಆಗುವವರೆಗೂ ಯಾವುದೇ ಕಾರಣಕ್ಕೂ ಹೋರಾಟ ನಿಲ್ಲಿಸುವುದಿಲ್ಲ ಎಂದು ಶಪಥ ಮಾಡಿದ್ದರು. ಆದರೆ ಅವರು ಇನ್ನಿಲ್ಲ. ಅವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ
ಸ್ವತಂತ್ರ ಧರ್ಮವಾಗುವತನಕ ಹೋರಾಟ ಮಾಡಿ ಅವರ ಕನಸು ನನಸು ಮಾಡಲು ಅವಿರತ ಪ್ರಯತ್ನ ಮಾಡುತ್ತೆವೆ ಎಂದು ಹೇಳಿದರು. ಜಾಗತಿಕ ಲಿಂಗಾಯತ ಮಹಾಸಭಾದ ಶ್ರೀಶೈಲಪ್ಪ ಬೆಳಮಗಿ, ಶಿವುಗೌಡ, ಶರಣಗೌಡ ಪಾಟೀಲ, ಬಸವರಾಜ ಪಾಟೀಲ, ಕುಪೇಂದ್ರ ತುಪ್ಪದ, ನೀಲಕಂಠ ಹಡಪದ, ಮಹಾನಂದಿ ಪಾರಾ, ಮಲ್ಲಿಕಾರ್ಜುನ ಪಟ್ಟಣಕರ್, ನಾಗರಾಜ ತುಪ್ಪದ, ದೊಡ್ಡಪ್ಪ ಪೂಜಾರಿ, ಶರಣಪ್ಪ ಪೂಜಾರಿ, ರಾಯಣ್ಣ ಭಂಡಾರಿ, ನಾಗರಾಜ ಹಳ್ಳಿ, ಶಾಂತಪ್ಪ ಮಾಡ್ಯಾಳ, ತುಕರಾಮ, ವಿಶ್ವನಾಥ ಹಡಪದ, ಸಂತೋಷ ಪಾಟೀಲ, ಪಿಂಟು ಕುಂಬಾರ, ಶರಣಪ್ಪ ಸೂರಾ ಇದ್ದರು.
Related Articles
Advertisement
ಗಣ್ಯರ ಸಂತಾಪಕಲಬುರಗಿ: ಬಸವಧರ್ಮದ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಅವರು ಲಿಂಗೈಕ್ಯ ಹಿನ್ನೆಲೆಯಲ್ಲಿ ಕಲಬುರಗಿಯ
ಮಠಾಧೀಶರು, ಗಣ್ಯರು ಸಂತಾಪ ಸೂಚಿಸಿದ್ದಾರೆ. ಜಗದ್ಗುರು ಶ್ರೀಶೈಲ ಸಾರಂಗಧರ ಮಠದ ಸಾರಂಗಧರ ದೇಶಿಕೇಂದ್ರ ಮಹಾಸ್ವಾಮಿ, ಮಾಜಿ ಸಚಿವ ಡಾ| ಶರಣಪ್ರಕಾಶ ಪಾಟೀಲ, ಮಾಜಿ ಶಾಸಕ ಬಿ.ಆರ್.ಪಾಟೀಲ, ಮುಖಂಡರಾದ ರವೀಂದ್ರ ಶಾಬಾದಿ, ಆರ್.ಜಿ.ಶೆಟಗಾರ ಹಾಗೂ ಇತರು ಮುಖಂಡರು ಶೋಕ ವ್ಯಕ್ತಪಡಿಸಿದ್ದಾರೆ.