Advertisement

ಮಾತೃಪೂರ್ಣ ಯೋಜನೆ: ಹೈಕೋರ್ಟ್‌ ನೋಟಿಸ್‌

07:15 AM Sep 15, 2017 | Team Udayavani |

ಬೆಂಗಳೂರು: ಅ. 2ರಿಂದ ಜಾರಿಯಾಗಲಿರುವ “ಮಾತೃಪೂರ್ಣ’ಯೋಜನೆಯ ಕಾರ್ಯವನ್ನು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ವಹಿಸಿರುವ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಕೆಯಾಗಿದೆ. ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಸಂಘ, ಮಂಗಳೂರು ನಗರ ಹಾಗೂ ಗ್ರಾಮಾಂತರ ಅಂಗನವಾಡಿ ಕಾರ್ಯಕರ್ತೆಯರ ಸಂಘ, ಹಾಗೂ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಯರು ಸೇರಿ 28 ಮಂದಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. 

Advertisement

ಈ ಅರ್ಜಿ ವಿಚಾರಣೆಯನ್ನು ಗುರುವಾರ ನಡೆಸಿದ ನ್ಯಾಯಮೂರ್ತಿ ಎ.ಎಸ್‌ ಬೋಪಣ್ಣ ಅವರಿದ್ದ ಏಕಸದಸ್ಯ ಪೀಠ, ಪ್ರತಿವಾದಿಗಳಾದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಾರ್ಯದರ್ಶಿ, ಇಲಾಖೆಯ ನಿರ್ದೇಶಕರು, ಉಪ ನಿರ್ದೇಶಕ, ಯೋಜನಾ ನಿರ್ದೇಶಕ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ನೋಟಿಸ್‌ ಜಾರಿಗೊಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next