Advertisement

ಆರೆಸ್ಸೆಸ್‌ ಕಾರ್ಯಕ್ರಮಕ್ಕೆ ಮಹಿಳಾ ಅತಿಥಿ

12:39 AM Sep 16, 2022 | Team Udayavani |

ನವದೆಹಲಿ: ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆಯುವ ವಾರ್ಷಿಕ ದಸರಾ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಪರ್ವತಾರೋಹಿ ಸಂತೋಷ್‌ ಯಾದವ್‌ ಅವರನ್ನು ಆರ್‌ಎಸ್‌ಎಸ್‌ ಆಹ್ವಾನಿಸಿದೆ.

Advertisement

ಈ ಮೂಲಕ ಅವರು ಆರ್‌ಎಸ್‌ಎಸ್‌ನ  ದಸರಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವ ಮೊದಲ ಮಹಿಳೆಯಾಗಲಿದ್ದಾರೆ.

“ಕಾರ್ಯಕ್ರಮದಲ್ಲಿ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಪ್ರಸ್ತುತ ಸಮಸ್ಯೆಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಲಿದ್ದಾರೆ ಹಾಗೂ ಮುಂದಿನ ಕಾರ್ಯಸೂಚಿಯನ್ನು ಪ್ರಕಟಿಸಲಿದ್ದಾರೆ,’ ಎಂದು ಆರ್‌ಎಸ್‌ಎಸ್‌ ಜಂಟಿ ಪ್ರಚಾರ ಮುಖ್ಯಸ್ಥ ನರೇಂದ್ರ ಠಾಕೂರ್‌ ತಿಳಿಸಿದರು.

ಸಂತೋಷ್‌ ಯಾದವ್‌ (54) ಅವರು ಎರಡು ಬಾರಿ ಮೌಂಟ್‌ ಎವರೆಸ್ಟ್‌ ಏರಿದ ಮೊದಲ ಮಹಿಳೆಯಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next