Advertisement

ಮಕ್ಕಳ ದಾಖಲಾತಿಗೆ ಆಂದೋಲನ ಜಾಥಾ

04:42 PM May 20, 2019 | Team Udayavani |

ತಿಪಟೂರು: ತಾಲೂಕಿನ ಹೊನ್ನವಳ್ಳಿಯ ಕರ್ನಾಟಕ ಪಬ್ಲಿಕ್‌ ಶಾಲೆ ವತಿಯಿಂದ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲಾ ಮುಖ್ಯವಾಹಿನಿಗೆ ದಾಖಲಿಸಲು ವಿಶೇಷ ದಾಖಲಾತಿ ಆಂದೋಲನ ಕಾರ್ಯಕ್ರಮವನ್ನು ನಡೆಸಿ, ಗ್ರಾಮದ ಪ್ರಮುಖ ಬೀದಿಯಲ್ಲಿ ಜಾಥಾ ನಡೆಸಲಾಯಿತು.

Advertisement

ಈ ವೇಳೆ ಪ್ರಾಂಶುಪಾಲ ಎಂ.ಡಿ. ಶಿವಕುಮಾರ್‌ ಮಾತನಾಡಿ,2019-20ನೇ ಸಾಲಿನಿಂದ ಪೂರ್ವ ಪ್ರಾಥಮಿಕ ಹಾಗೂ ಒಂದನೇ ತರಗತಿಗೆ ಪ್ರವೇಶ ಆರಂಭವಾಗಿದೆ. ಈ ಸಂಬಂಧಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ದಾಖಲಿಸುವ ಸಲುವಾಗಿ ಜಾಥಾ ನಡೆಸಿ, ಜನರಿಗೆ ಕರಪತ್ರ ಹಂಚುವ ಮೂಲಕ ಮಾಹಿತಿ ನೀಡಲಾಗುತ್ತಿದೆ. 1ರಿಂದ 12ನೇ ತರಗತಿಯವರೆಗೆ ಕನ್ನಡ ಮತ್ತು ಇಂಗ್ಲಿಷ್‌ ಮಾಧ್ಯಮಗಳಲ್ಲಿಉಚಿತ ಶಿಕ್ಷಣ ದೊರೆಯಲಿದೆ. ರಾಜ್ಯ ಸರ್ಕಾರ 1ರಿಂದ ಪದವಿ ಪೂರ್ವ ಹಂತದವರೆಗೆ ಒಂದೇಸೂರಿನಡಿ ಉಚಿತ ಶಿಕ್ಷಣ ನೀಡುವುದು ಕರ್ನಾಟಕ ಪಬ್ಲಿಕ್‌ ಶಾಲೆಯ ಉದ್ದೇಶವಾಗಿದೆ ಎಂದು ಹೇಳಿದರು.

ಎಲ್ಲಾ ಸೌಲಭ್ಯಗಳು ಉಚಿತ: ಶಾಲೆಯಲ್ಲಿ ಖಾಸಗಿ ಶಾಲೆಗಳಲ್ಲಿ ದೊರೆಯುವ ಎಲ್ಲಾ ಸೌಲಭ್ಯಗಳುಉಚಿತವಾಗಿದೆ. ವಿದ್ಯಾರ್ಥಿಗಳಿಗೆ ಸ್ಮಾಟ್‌ ìಕ್ಲಾಸ್‌, ಕಂಪ್ಯೂಟರ್‌ ಶಿಕ್ಷಣ, ಉತ್ತಮ ಗ್ರಂಥಾಲಯ, ಉಚಿತ ಸಮವಸ್ತ್ರ, ಪಠ್ಯಪುಸ್ತಕ ದೊರೆಯಲಿದೆ. ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆದಸರಾ ರಜೆಯ ಅವಧಿಯಲ್ಲಿ ವಿಶೇಷ ತರಗತಿ ನಡೆಸಲಾಗುವುದು. ಆದ್ದರಿಂದ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಸೇರಿಸಿ ಶೈಕ್ಷಣಿಕ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ದಾಖಲಾತಿ ಆಂದೋಲನದಲ್ಲಿ ಮುಖ್ಯಶಿಕ್ಷಕಿ ಲಕ್ಷ್ಮೀದೇವಮ್ಮ, ಶಿಕ್ಷಕರಾದ ವಸಂತ ಕುಮಾರ್‌, ರಾಮಸ್ವಾಮಿ,ಕುಮಾರಸ್ವಾಮಿ, ಗೀತಾ, ಮಮತಾ, ಪದ್ಮಪ್ರಿಯ ಮತ್ತಿತರರಿದ್ದರು

Advertisement

Udayavani is now on Telegram. Click here to join our channel and stay updated with the latest news.

Next