Advertisement
ನಗರದ ಶರಣಬಸವೇಶ್ವರ ಜಾತ್ರಾ ಮೈದಾನದಲ್ಲಿ ಹೈದ್ರಾಬಾದ್ ಕರ್ನಾಟಕ ರೈತ ಸಂಘ ರವಿವಾರ ಆಯೋಜಿಸಿದ್ದ ರೈತ ಜಾಗೃತಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಡಾ.ಸ್ವಾಮಿನಾಥ್‌ನ ವರದಿ ಯಥಾವತ್ತಾಗಿ ಜಾರಿಗೊಳಿಸುವುದು, ಕೃಷಿ ಉತ್ಪನ್ನಗಳಿಗೆ ಸೂಕ್ತ ಬೆಂಬಲ ಬೆಲೆ ಕಲ್ಪಿಸುವುದು ಹಾಗೂ ರೈತರಿಗೆ ಮಾಸಾಶನ ಸೇರಿದಂತೆ ಇತರ ರೈತರ ಬೇಡಿಕೆಗಳಿಗೆ ಕೇಂದ್ರ ಸರ್ಕಾರ ಸ್ಪಂದಿಸುತ್ತದೆ ಎಂದು ಬಲವಾಗಿ ನಂಬಲಾಗಿತ್ತು. ಆದರೆ ಅಧಿಕಾರಕ್ಕೆ ಬಂದು ನಾಲ್ಕು ವರ್ಷಗಳಾದರೂ ಕಣ್ಣೆತ್ತಿ ನೋಡದೇ ಇರುವುದರಿಂದ ಸಮಸ್ಯೆಗಳನ್ನು ಕಿವಿಗೆ ಹಾಕಿಕೊಳ್ಳದ ಹಿನ್ನೆಲೆಯಲ್ಲಿ ಆಂದೋಲನಕ್ಕೆ ಇಳಿಯಲಾಗುತ್ತಿದೆ ಎಂದರು.
ಧುಮುಕಲಾಗುವುದು. ರೈತರ ಶಕ್ತಿ ಏನೆಂಬುದನ್ನು ಕೇಂದ್ರಕ್ಕೆ ಚುರುಕು ಮುಟ್ಟಿಸಲಾಗುವುದು. 22 ವರ್ಷಗಳಲ್ಲಿ 12 ಲಕ್ಷ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಒಬ್ಬನೇ ಒಬ್ಬ ಉದ್ಯಮಿ ಆತ್ಮಹತ್ಯೆ ಮಾಡಿಕೊಂಡ ಉದಾಹರಣೆ ಇಲ್ಲ. ಉದ್ಯಮಗಳಿಗೆ ನೆರವು ನೀಡುವ ಸರ್ಕಾರಗಳು ರೈತರ ನೆರವಿಗೆ ಏಕೆ ಮುಂದಾಗುವುದಿಲ್ಲ? ಪ್ರಧಾನಿ ಮೋದಿ ಅವರು ವಿದೇಶದಲ್ಲಿರುವ ಕಪ್ಪು ಹಣ ತಂದು ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ. ಜಮಾ ಮಾಡುತ್ತಾರೆ ಹಾಗೂ ರೈತರ ಬವಣೆಗೆ ಸ್ಪಂದಿಸುತ್ತಾರೆ ಎಂದು ನಂಬಿ ಎಲ್ಲರೂ ಬೆಂಬಲಿಸಿದ್ದಾರೆ. ಆದರೆ 15 ರೂ. ಸಹ ಜೇಬಿಗೆ ಹಾಕಿಲ್ಲ ಎಂದರು.
Related Articles
Advertisement