ರಾಮನಗರ: ತಾಲೂಕಿನ ಜಯಪುರ ಗೇಟ್ ಬಳಿ ಚಲಿಸುತ್ತಿದ್ದ ಕಾರು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ.
Advertisement
ಬೆಂಗಳೂರು ಮೂಲದ ಕುಟುಂಬ ಒಂದು ವಡ್ಡರದೊಡ್ಡಿ ಗ್ರಾಮದ ಹಬ್ಬಕ್ಕೆ ಬಂದು ಬೆಂಗಳೂರಿಗೆ ವಾಪಾಸಾಗುವ ವೇಳೆ ಕಾರಿನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದ್ದು ಬೆಂಕಿಯ ಕೆನ್ನಾಲಗೆಗೆ ಕಾರು ಸಂಪೂರ್ಣ ಸುಟ್ಟು ಕರಕಲಾಗಿದ್ದು ಅದೃಷ್ಟವಶಾತ್ ಕಾರಿನಲ್ಲಿ ದವರು ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ಅಗ್ನಿಶಾಮಕ ಠಾಣೆ ಸಿಬಂದಿ ರಾಜು ತಿಳಿಸಿದರು.ರಾಮನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.