Advertisement
ಸುಮಾರು 130 ಜನರನ್ನು ಹೊತ್ತ ಮೀನುಗಾರಿಕಾ ದೋಣಿ ನಾಂಪುಲಾ ಪ್ರಾಂತ್ಯದ ಬಳಿಯ ದ್ವೀಪವೊಂದಕ್ಕೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಂಪುಲಾ ರಾಜ್ಯ ಕಾರ್ಯದರ್ಶಿ ಜೈಮ್ ನೆಟೊ ನೀಡಿದ ಹೇಳಿಕೆ ಪ್ರಕಾರ ದೋಣಿಯಲ್ಲಿ ಸಾಮರ್ಥ್ಯಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಸಾಗಿಸುತ್ತಿದ್ದರು ಎಂದು ಹೇಳಲಾಗಿದೆ ಇದರ ಪರಿಣಾಮ ದೋಣಿ ಸಮುದ್ರದ ಮಧ್ಯದಲ್ಲಿ ಮುಳುಗಿದೆ ಈ ವೇಳೆ ತೊಂಭತ್ತಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು ಇನ್ನೂ ಹಲವಾರು ಮಂದಿ ನಾಪತ್ತೆಯಾಗಿದ್ದಾರೆ. ಘಟನೆ ನಡೆದ ವಿಚಾರ ತಿಳಿಯುತ್ತಲೇ ಘಟನಾ ಸ್ಥಳಕ್ಕೆ ರಕ್ಷಣಾ ತಂಡ ಧಾವಿಸಿದ್ದು ನಾಪತ್ತೆಯಾದವರ ಶೋಧ ಕಾರ್ಯ ನಡೆಸುತ್ತಿದ್ದಾರೆ, ಅಲ್ಲದೆ ರಕ್ಷಣೆ ಮಾಡಿದವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
Advertisement
130 ಮಂದಿ ಪ್ರಯಾಣಿಸುತ್ತಿದ್ದ ದೋಣಿ ಮುಳುಗಡೆ; 90ಕ್ಕೂ ಹೆಚ್ಚು ಮೃತ್ಯು, ಹಲವರು ನಾಪತ್ತೆ
08:55 AM Apr 08, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.