ರೇವಾ: ಮಧ್ಯಪ್ರದೇಶದಲ್ಲಿ 16 ವರ್ಷದ ಬಾಲಕ 58 ವರ್ಷದ ಮಹಿಳೆಯೊಬ್ಬಳ ಮೇಲೆ ಅತ್ಯಾಚಾರ ಎಸಗಿ ಆಕೆಯ ಬಾಯಿಯನ್ನು ಬಿಗಿದು ಬರ್ಬರವಾಗಿ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಹನುಮಾನ ಪೊಲೀಸ್ ಠಾಣೆ ವ್ಯಾಪ್ತಿಯ ಕೈಲಾಸಪುರಿ ಗ್ರಾಮದಲ್ಲಿ ಜನವರಿ 30 ರಂದು ರಾತ್ರಿ ಈ ಘಟನೆ ನಡೆದಿದೆ. ಬಾಲಕ ಆಕೆಯ ಬಾಯಿಗೆ ಪ್ಲಾಸ್ಟಿಕ್ ಚೀಲ ಮತ್ತು ಬಟ್ಟೆಯನ್ನು ತುಂಬಿ, ಆಕೆ ವಾಸವಿದ್ದ ಕಟ್ಟಡದ ನಿರ್ಮಾಣ ಹಂತದ ಭಾಗಕ್ಕೆ ಎಳೆದೊಯ್ದು, ಆಕೆಯ ತಲೆ ಮತ್ತು ದೇಹದ ಇತರ ಭಾಗಗಳಿಗೆ ಮಾರಕಾಯುಧದಿಂದ ಹೊಡೆದು ಆಕೆಯ ಖಾಸಗಿ ಭಾಗಗಳಿಗೆ ಗಾಯಗೊಳಿಸಿದ್ದಾನೆ.
ಎರಡು ವರ್ಷಗಳ ಹಿಂದೆ ಬಾಲಕ ಮೊಬೈಲ್ ಫೋನ್ ಕದ್ದಿದ್ದಾನೆ ಎಂದು ಮಹಿಳೆಯ ಮನೆಯವರು ಆರೋಪಿಸಿದ್ದರು ಮತ್ತು ಹುಡುಗ ಅದಕ್ಕೆ ಪ್ರತೀಕಾರ ತೀರಿಸಿಕೊಳ್ಳಲು ಬಯಸಿದ್ದಎಂದು ಪೊಲೀಸರು ಹೇಳಿದ್ದಾರೆ.
“ಬಾಲಕನನ್ನ ಬಂಧಿಸಲಾಗಿದ್ದು, ವಿಚಾರಣೆಯ ಸಮಯದಲ್ಲಿ ಅಪರಾಧವನ್ನು ಒಪ್ಪಿಕೊಂಡಿದ್ದಾನೆ” ಎಂದು ಅಧಿಕಾರಿಗಳು ಹೇಳಿದ್ದಾರೆ.
ಆತನನ್ನು ಬಾಲಾಪರಾಧಿ ಗೃಹಕ್ಕೆ ಕಳುಹಿಸಲಾಗಿದ್ದು ಆತನ ವಿರುದ್ಧ ಭಾರತೀಯ ದಂಡ ಸಂಹಿತೆ ವಿವಿಧ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.