ಕಾಪು: ಮಾಜಿ ಲೋಕಸಭೆ ಹಾಗೂ ಹಾಲಿ ರಾಜ್ಯಸಭೆ ಸದಸ್ಯೆ, ಬಹುಭಾಷಾ ಚಿತ್ರನಟಿ ಜಯಪ್ರಧಾ ಮಂಗಳವಾರ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದರು.
ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಮಾರಿಯಮ್ಮನ ದೇವಸ್ಥಾನದ ಜೀರ್ಣೋದ್ಧಾರ ಕೆಲಸವನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿಯವರು ದೇವರಲ್ಲಿ ಪ್ರಾರ್ಥಿಸಿ ಜಯಪ್ರಧಾ ಅವರಿಗೆ ಪ್ರಸಾದ ನೀಡಿದರು.
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗುಡ್ಡ ಪಾಣಾರ ಅವರನ್ನು ದಂಪತಿ ಸಹಿತವಾಗಿ ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ದೇಗುಲದ ಕಾರ್ಯ ನಿರ್ವಹಣಾಧಿಕಾರಿ ಪ್ರಶಾಂತ್ ಶೆಟ್ಟಿ, ಆಡಳಿತ ಮಂಡಳಿ ಅಧ್ಯಕ್ಷ ರಮೇಶ್ ಹೆಗ್ಡೆ ಕಲ್ಯಾ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ನಡಿಕೆರೆ ರತ್ನಾಕರ ಶೆಟ್ಟಿ, ಉಪಾಧ್ಯಕ್ಷರಾದ ಮಾಧವ ಪಾಲನ್, ಗಂಗಾಧರ ಸುವರ್ಣ, ದೇವಿಪ್ರಸಾದ್ ಶೆಟ್ಟಿ, ಕಾಪು ದಿವಾಕರ ಶೆಟ್ಟಿ, ಅನಿಲ್ ಬಳ್ಳಾಲ್ ಮೊದಲಾದವರು ಉಪಸ್ಥಿತರಿದ್ದರು.