Advertisement

ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಆರೋಗ್ಯ ಸ್ಥಿತಿ ಗಂಭೀರ

05:13 PM Sep 17, 2020 | keerthan |

ಬೆಂಗಳೂರು: ನೂತನ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

Advertisement

ಕೋವಿಡ್-19 ಸೋಂಕಿನಿಂದ ಬಳಲುತ್ತಿದ್ದ ಅವರು ಪ್ರಮಾಣ ವಚನ ಸ್ವೀಕರಿಸಿದ್ದರೂ ರಾಜ್ಯಸಭಾ ಕಲಾಪದಲ್ಲಿ ಪಾಲ್ಗೊಳ್ಳದೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ಮೂಲತಃ ರಾಯಚೂರು ಜಿಲ್ಲೆಯ ಲಿಂಗಸೂಗೂರಿನವರಾದ ಗಸ್ತಿ, ಕಳೆದ ನಾಲ್ಕು ದಶಕಗಳಿಂದ ನಗರದಲ್ಲಿ ನೆಲೆಸಿದ್ದರು. ಮೂರು ದಶಕದಿಂದ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದರು. ಅವರು ತೋರಿದ್ದ ಪಕ್ಷ ನಿಷ್ಠೆ ಪರಿಗಣಿಸಿ ಈಚೆಗೆ ರಾಜ್ಯಸಭೆಗೆ ಆಯ್ಕೆ ಮಾಡಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next