ಹೊಸನಗರ: ರಾಣೇಬೆನ್ನೂರು- ಬೈಂದೂರು 766ಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ನಗರ, ಮಡೋಡಿ, ಸೇರಿದಂತೆ 7 ಸೇತುವೆಗಳ ಪುನರ್ ನಿರ್ಮಾಣಕ್ಕೆ ಅಂದಾಜು 20 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಿರ್ವಹಿಸಲಾಗುತ್ತಿದ್ದು, ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.
ಕಾರಣಗಿರಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಎದುರು ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಪ್ರಸಕ್ತ ರಾಷ್ಟ್ರೀಯ ಹೆದ್ದಾರಿ ಯೋಜನೆಗೆ ಅಂದಾಜು 696 ಕೋಟಿ ವಾರ್ಷಿಕ ಪ್ಲಾÂನ್ ಮಾಡಲಾಗಿತ್ತು. ಆದರೆ ಕೇಂದ್ರ ಸರ್ಕಾರದಿಂದ ಹೆಚ್ಚುವರಿಯಾಗಿ 510 ಕೋಟಿಯನ್ನು ತರಲಾಗಿದೆ. ಒಟ್ಟು 1200 ಕೋಟಿ ರೂ. ಕಾಮಗಾರಿ ನಿರ್ವಹಿಸಲಾಗುತ್ತಿದೆ ಎಂದರು.
ಬೆಕ್ಕೋಡಿ ಮತ್ತು ಸುತ್ತಾ ಸೇತುವೆ ನಿರ್ಮಾಣಕ್ಕೆ ಆದ್ಯತೆ: ಬೆಕ್ಕೋಡಿ ಸೇತುವೆ ನಿರ್ಮಾಣ ಆಗಬೇಕು ಎನ್ನುವುದು ಇಲ್ಲಿಯ ಜನರ ಬಹುದಿನದ ಕನಸು. ಬೆಕ್ಕೋಡಿ ಸೇತುವೆ ಆಗುವ ಜೊತೆಗೆ ಅದಕ್ಕೆ ಪೂರಕವಾಗಿ ಸುತ್ತಾ ಸೇತುವೆ ನಿರ್ಮಾಣವಾಗಬೇಕಿದೆ. ಎರಡು ಸೇತುವೆಗಳಿಂದ ರೂ.60 ರಿಂದ 70 ಕೋಟಿ ವೆಚ್ಚವಾಗಲಿದ್ದು, ಕೆಆರ್‌ಡಿಸಿಎಲ್ ಜೊತೆ ಮಾತುಕತೆ ನಡೆಸಿದ್ದು ಸದ್ಯದಲ್ಲೇ ಸೇತುವೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದರು.
ಮೊಬೈಲ್ ಟವರ್‌ಗಾಗಿ ಬೇಡಿಕೆ: ಶಾಸಕ ಹರತಾಳು ಹಾಲಪ್ಪ ಮಾತನಾಡಿ, ಸಾಗರ- ಹೊಸನಗರ ಭಾಗ ಹೆಚ್ಚಾಗಿ ಹಳ್ಳಿಗಳು, ಗುಡ್ಡಗಾಡು ಪ್ರದೇಶದಿಂದ ಕೂಡಿದ್ದು ಮೊಬೈಲ್ ನೆಟ್‌ವರ್ಕ್ ಸಮಸ್ಯೆ ಎದ್ದು ಕಾಣುತ್ತಿದೆ. ಮೊಬೈಲ್ ಟವರ್ ನಿರ್ಮಾಣಕ್ಕೆ ಕೇಂದ್ರದಿಂದ ಹೆಚ್ಚು ಅನುದಾನ ತರಬೇಕಿದೆ. ಈ ನಿಟ್ಟಿನಲ್ಲಿ ಪ್ರಯತ್ನ ಮಾಡುವಂತೆ ಸಂಸದ ರಾಘವೇಂದ್ರ ಅವರಿಗೆ ಮನವಿ ಮಾಡಿದರು. ಸಿಎಂ ಸಭೆಗೆ ಮನವಿ: ನಗರ ಹೋಬಳಿಯಲ್ಲಿ ಹೆಚ್ಚಾಗಿ ಸಂತ್ರಸ್ತರು ಇದ್ದು, ಭೂಮಿ ಹಕ್ಕಿಗಾಗಿ ಹಲವು ದಶಕದಿಂದ ಹೋರಾಟ ಮಾಡುತ್ತಿದ್ದಾರೆ. ನಾಲ್ಕು ಬಾರಿ ಶಾಸಕರಾದರೂ ಅವರ ಬೇಡಿಕೆಗೆ ಸ್ಪಂದಿಸಲು ಸಾಧ್ಯವಾಗಿಲ್ಲ. ಇತ್ತೀಚೆಗೆ ನಡೆದ ಪ್ರತಿಭಟನೆಯಲ್ಲಿ ಡಿಸಿ ಜೊತೆಗೆ ಭೇಟಿ ನೀಡಿ ರೈತರೊಂದಿಗೆ ಸಮಾಲೋಚನೆ ನಡೆಸಲಾಗಿದೆ. ಅವರ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಸಿಎಂ ನೇತೃತ್ವದಲ್ಲಿ ಕಂದಾಯ, ಅರಣ್ಯ ಇಲಾಖೆಯ ಸಚಿವರು ಹಿರಿಯ ಅ ಧಿಕಾರಿಗಳ ಸಭೆ ನಡೆಸಿ ನಿರ್ಣಯ ಕೈಗೊಳ್ಳಬೇಕಿದೆ. ಸಭೆ ಆಯೋಜನೆ ನಿಟ್ಟಿನಲ್ಲಿ ಸಿಎಂ ಗಮನಕ್ಕೆ ತರುವಂತೆ ಸಂಸದರಿಗೆ ಶಾಸಕ ಆರಗ ಜ್ಞಾನೇಂದ್ರ ಮನವಿ ಮಾಡಿದರು.
ತಾಪಂ ಅಧ್ಯಕ್ಷ ವಿರೇಶ್ ಆಲುವಳ್ಳಿ, ಜಿಪಂ ಸದಸ್ಯ ಸುರೇಶ ಸ್ವಾಮಿರಾವ್, ಅಂಬೇಡ್ಕರ್ ಅಭಿವೃದ್ಧಿ ನಿಗಮದ ನಿರ್ದೇಶಕ ಎನ್.ಆರ್. ದೇವಾನಂದ್, ರಾಷ್ಟ್ರೀಯ ರಸ್ತೆ ಅಭಿವೃದ್ಧಿ ಪ್ರಾ ಧಿಕಾರದ ಎಇಇ ಪೀರ್ ಪಾಶಾ, ತಾಪಂ ಸದಸ್ಯರಾದ ಕೆ.ವಿ. ಸುಬ್ರಹ್ಮಣ್ಯ, ಕೆ.ವಿ. ಕೃಷ್ಣಮೂರ್ತಿ, ಕಣಿವೆಬಾಗಿಲು ಸುಬ್ರಹ್ಮಣ್ಯ, ಹನಿಯ ರವಿ ಮತ್ತಿತರರು ಇದ್ದರು.